ನವದೆಹಲಿ: ಚುನಾವಣಾ ಆಯೋಗವು ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಇಂದು (ಶುಕ್ರವಾರ) ಮಧ್ಯಾಹ್ನ ಘೋಷಣೆ ಮಾಡಲಿದೆ.

ಮಧ್ಯಾಹ್ನ 3ಕ್ಕೆ ಪತ್ರಿಕಾಗೋಷ್ಠಿ ಕರೆದಿರುವ ಆಯೋಗ, ಯಾವ ರಾಜ್ಯಗಳಿಗೆ ಚುನಾವಣೆ ಘೋಷಿಸಲಿದೆ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಿಲ್ಲ. ಆದರೆ, ಹರಿಯಾಣ ಹಾಗೂ ಮಹಾರಾಷ್ಟ್ರಕ್ಕೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ದಟ್ಟವಾಗಿದೆ.

ಈ ಎರಡೂ ರಾಜ್ಯಗಳ ವಿಧಾನಸಭೆಗಳ ಅಧಿಕಾರದ ಅವಧಿಯು ಕ್ರಮವಾಗಿ ನವೆಂಬರ್ 3 ಮತ್ತು ನವೆಂಬರ್ 26 ರಂದು ಮುಕ್ತಾಯವಾಗಲಿವೆ.

ಸುಪ್ರೀಂಕೋರ್ಟ್ ವಿಧಿಸಿರುವ ಗಡುವಿನ ಪ್ರಕಾರ ಸೆಪ್ಟೆಂಬರ್ 30ರ ಒಳಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೂ ಚುನಾವಣೆ ನಡೆಸಬೇಕಿದೆ.

ಹೀಗಾಗಿ, ಜಮ್ಮು ಮತ್ತು ಕಾಶ್ಮೀರಕ್ಕೂ ಚುನಾವಣೆ ಘೋಷಣೆಯಾಗುವ ನಿರೀಕ್ಷೆ ಇದೆ.

ಚುನಾವಣಾ ಆಯೋಗವು, ಚುನಾವಣಾ ಸಿದ್ಧತೆಯ ಮೇಲ್ವಿಚಾರಣೆ ಸಲುವಾಗಿ ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣಕ್ಕೆ ಭೇಟಿ ನೀಡಿತ್ತು.
.'ಒಂದು ದೇಶ, ಒಂದು ಚುನಾವಣೆ', 'ಜಾತ್ಯತೀತ ನಾಗರಿಕ ಸಂಹಿತೆ' ಪ್ರತಿಪಾದಿಸಿದ ಮೋದಿ.Independence Day | ಜಾತ್ಯತೀತ ಸಂಹಿತೆ: ಮೋದಿ ಮಾತಿಗೆ ಕಟುಟೀಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.