ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ದೇಶದ ಪ್ರಧಾನಿ ಆಗುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಖ್ಯಾತ ಉದ್ಯಮಿ, ಟೆಸ್ಲಾದ ಸಿಇಒ ಇಲಾನ್ ಮಸ್ಕ್ ಅವರು ಮೋದಿಗೆ ಶುಭ ಹಾರೈಸಿದ್ದಾರೆ.

‘ವಿಶ್ವದ ಅತಿದೊಡ್ಡ ಪ್ರಜಾಸತ್ತಾತ್ಮಕ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಭಾರತದಲ್ಲಿ ನನ್ನ ಕಂಪನಿಗಳನ್ನು ಆರಂಭಿಸುವ ಮೂಲಕ ಅತ್ಯಾಕರ್ಷಕವಾಗಿ ಕೆಲಸ ಮಾಡುವುದನ್ನು ಎದುರು ನೋಡುತ್ತಿದ್ದೇನೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಳೆದ ವರ್ಷದ ಜೂನ್‌ನಲ್ಲಿ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಮಸ್ಕ್ ಅವರನ್ನು ಭೇಟಿ ಮಾಡಿದ್ದರು. 2024ರಲ್ಲಿ ಭಾರತಕ್ಕೆ ಭೇಟಿ ನೀಡುವುದಾಗಿ ಮಾತುಕತೆ ವೇಳೆ ಮಸ್ಕ್ ಪ್ರಕಟಿಸಿದ್ದರು.

ಕಂಪನಿಯ ಜವಾಬ್ದಾರಿಗಳನ್ನು ನಿಭಾಯಿಸಬೇಕಾಗಿರುವುದರಿಂದ ಭಾರತದ ಭೇಟಿ ಮುಂದೂಡಿರುವುದಾಗಿ ಮಸ್ಕ್ ತಿಳಿಸಿದ್ದರು.

ಏಪ್ರಿಲ್ 21 ಮತ್ತು 22ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಅಲ್ಲದೇ ಭಾರತದಲ್ಲಿ ಟೆಸ್ಲಾ ಕಂಪನಿಯ ಘಟಕದ ಸ್ಥಾಪನೆ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿತ್ತು.

ಭೇಟಿ ವಿಳಂಬದ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಮಸ್ಕ್, ‘ಕಂಪನಿಯ ಕೆಲಸದಲ್ಲಿ ನಿರತರಾಗಿರುವುದರಿಂದ ಭಾರತಕ್ಕೆ ಭೇಟಿ ನೀಡಲಾಗುತ್ತಿಲ್ಲ. ಆದರೆ ಇದೇ ವರ್ಷ ಭಾರತಕ್ಕೆ ಭೇಟಿ ನೀಡುತ್ತೇನೆ’ ಎಂದಿದ್ದರು.

ಸಂಸತ್ತಿನಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ನಾಯಕನನ್ನಾಗಿ ನರೇಂದ್ರ ಮೋದಿ ಅವರನ್ನು ಎನ್‌ಡಿಎ ಸಂಸದರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ದೇಶ ವಿದೇಶದ ಗಣ್ಯರ ಸಮ್ಮುಖದಲ್ಲಿ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಭಾನುವಾರ ರಾತ್ರಿ 7.15ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
.ಟೆಸ್ಲಾ ಇ.ವಿ ಘಟಕ: ಭಾರತದಲ್ಲಿ ಸ್ಥಳ ಪರಿಶೀಲನೆಗೆ ತಂಡ.ಹೊಸ ಇ.ವಿ ನೀತಿಗೆ ಕೇಂದ್ರ ಸರ್ಕಾರ ಅಸ್ತು: ಟೆಸ್ಲಾ ಹಾದಿ ಸುಗಮ.ಗುಜರಾತ್ನಲ್ಲಿ ಟೆಸ್ಲಾ ಕಾರು ಘಟಕ ಸ್ಥಾಪನೆ.ಇವಿ ಉತ್ಪಾದನ ಘಟಕ: ವಾಣಿಜ್ಯ ಸಚಿವರನ್ನು ಭೇಟಿ ಮಾಡಲಿರುವ ಟೆಸ್ಲಾ ಪ್ರತಿನಿಧಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.