ಹೈದರಾಬಾದ್: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಹಾಗೂ ಇತರರಿಗೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.

ಹೈದರಾಬಾದ್ ಸೇರಿದಂತೆ ರಾಜ್ಯದ ಐದು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೆಡ್ಡಿ ಅವರ ಪುತ್ರ ಹಾಗೂ ರಾಘವ ಗ್ರೂಪ್‌ನ ಹರ್ಷ ಅವರು ₹ 5 ಕೋಟಿಯ ಏಳು ವಾಚ್‌ಗಳನ್ನು ಖರೀದಿಸಿದ್ದಾರೆ ಎಂಬುದಾಗಿ ಕಂದಾಯ ಗುಪ್ತಚರ ಇಲಾಖೆ (ಡಿಆರ್‌ಐ) ದೂರು ನೀಡಿತ್ತು.

ವಾಚ್ ಖರೀದಿಸಲು ಮಾಡಿದ ಪಾವತಿಗೂ, ಸುಮಾರು ₹ 100 ಕೋಟಿ ಮೊತ್ತದ ಹವಾಲಾ ಹಾಗೂ ಕ್ರಿಪ್ಟೊ ಕರೆನ್ಸಿ ಜಾಲಕ್ಕೂ ನಂಟು ಇದೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ನಾಯಕ ರೆಡ್ಡಿ ಅವರು ತೆಲಂಗಾಣ ಸರ್ಕಾರದಲ್ಲಿ ಕಂದಾಯ, ವಸತಿ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಸಚಿವರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.