ಮುಂಬೈ: ಮುಂಬೈನಲ್ಲಿ ನಡೆದ ಅನಂತ್ ಅಂಬಾನಿ ರಾಧಿಕಾ ಮರ್ಚಂಟ್ ವಿವಾಹದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಆತನನ್ನು ವೈರಲ್ ಶಾ ಎಂದು ಗುರುತಿಸಲಾಗಿದೆ. 32 ವರ್ಷದ ಈತ ವೃತ್ತಿಯಲ್ಲಿ ಎಂಜಿನಿಯರ್ ಆಗಿದ್ದಾನೆ. ಎಕ್ಸ್ನಲ್ಲಿ ffsfir ಹೆಸರಿನ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಅಂಬಾನಿ ಕುಟುಂಬದ ಮದುವೆಯಲ್ಲಿ ಬಾಂಬ್ ಸ್ಫೋಟಗೊಂಡರೆ ನಾಳೆ ಅರ್ಧ ಜಗತ್ತು ತಲೆಕೆಳಗಾಗಲಿದೆ ಎನ್ನುವ ಯೋಚನೆ ನನ್ನ ತಲೆಯಲ್ಲಿ ಬರುತ್ತಿದೆ’ ಎಂದು ಪೋಸ್ಟ್ ಹಂಚಿಕೊಂಡಿದ್ದನು.

ಬೆದರಿಕೆ ಇರುವ ಹಿನ್ನೆಲೆ ಪೊಲೀಸರು ವಿವಾಹ ಸಮಾರಂಭ ನಡೆಯುತ್ತಿದ್ದ ಸ್ಥಳದಲ್ಲಿ ಭದ್ರತೆ ಬಿಗಿ ಮಾಡಿದ್ದರು.

ಪೋಸ್ಟ್ ಆಧರಿಸಿ ತನಿಖೆ ನಡೆಸಿದಾಗ ಆತ ವಡೋದರದಲ್ಲಿ ಇರುವ ಬಗ್ಗೆ ಮಾಹಿತಿ ತಿಳಿಯಿತು. ತಕ್ಷಣವೇ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರ ತಂಡ ಗುಜರಾತ್ಗೆ ತೆರಳಿ ಆತನನ್ನು ಬಂಧಿಸಿ ಮುಂಬೈಗೆ ಕರೆತಂದಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.