ಚೆನ್ನೈ: ಕಾಂಗ್ರೆಸ್ ನೀತಿಯ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ವಿವರಣೆ ನೀಡುವಂತೆ ತಮಿಳುನಾಡು ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿಯು ಸಂಸದ ಕಾರ್ತಿ ಚಿದಂಬರಂ ಅವರಿಗೆ ನೋಟಿಸ್ ನೀಡಿದೆ.

ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರ ಪುತ್ರ ಮತ್ತು ಶಿವಗಂಗಾ ಲೋಕಸಭಾ ಕ್ಷೇತ್ರದ ಸಂಸದ ಕಾರ್ತಿ ಚಿದಂಬರಂ ಅವರು ಕಾಂಗ್ರೆಸ್ ನೀತಿ ನಿಯಮಗಳ ವಿರುದ್ಧ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದು ಈ ಕುರಿತು ವಿವರಣೆ ನೀಡುವಂತೆ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತಮಿಳುನಾಡು ಕಾಂಗ್ರೆಸ್ ಹೇಳಿದೆ.

ಇತ್ತೀಚೆಗೆ ‘ದಿನ ತಂತಿ‘ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಹುಲ್ ಗಾಂಧಿಯನ್ನು ನರೇಂದ್ರ ಮೋದಿಗೆ ಸರಿಸಮನಾದ ನಾಯಕ ಎಂದು ಪರಿಗಣಿಸಲಾಗುವುದಿಲ್ಲ ಹಾಗೂ ರಾಹುಲ್ ಗಾಂಧಿಗಿಂತ ನರೇಂದ್ರ ಮೋದಿ ಹೆಚ್ಚು ಜನಪ್ರಿಯ ವ್ಯಕ್ತಿ ಎಂದು ಹೇಳಿದ್ದರು.

ಮತ್ತೊಂದು ಸುದ್ದಿ ವಾಹಿನಿ ಜೊತೆ ಮಾತನಾಡಿದ ಅವರು, ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಇವಿಎಂಗಳನ್ನು ತಿರುಚುವ ಮೂಲಕ ಬಿಜೆಪಿ ಅನೇಕ ರಾಜ್ಯಗಳಲ್ಲಿ ಗೆಲ್ಲುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೆ, ಕಾರ್ತಿ ಚಿದಂಬರಂ ಅವರ ಹೇಳಿಕೆಗಳು ಇದಕ್ಕೆ ವ್ಯತಿರಿಕ್ತವಾಗಿವೆ.

ಈ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆಗಳಿಗೆ ವಿವರಣೆ ನೀಡುವಂತೆ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ತಮಿಳುನಾಡು ಕಾಂಗ್ರೆಸ್ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.