ಹೈದರಾಬಾದ್: ನೀತಿ ಆಯೋಗದ ಸಭೆಯಲ್ಲಿ ಮಾತನಾಡಲು ಸಮಯ ನಿರಾಕರಿಸಿದ್ದನ್ನು ಪ್ರತಿಭಟಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಭೆಯಿಂದ ಹೊರನಡೆದಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ಹೊರಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೈತ್ರಿಯ ಭಾಗವಾಗಿ ತೃಣಮೂಲ ಕಾಂಗ್ರೆಸ್ (ಟಿಎಂಪಿ) ಇತರೆ ಪಕ್ಷಗಳಿಗೆ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿರಲಿಲ್ಲ. ಇದರಿಂದಾಗಿ ‘ಇಂಡಿಯಾ’ ಬಣದ ನಾಯಕರ ನಡುವೆ ಒಡಕು ಮೂಡಿತ್ತು’ ಎಂದು ಹೇಳಿದ್ದಾರೆ.

‘ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರು ಹೇಗೆ ಆಡಳಿತ ನಡೆಸುತ್ತಿದ್ದಾರೆ ಮತ್ತು ಕಾಂಗ್ರೆಸ್ಗೆ ಯಾವ ರೀತಿ ಗೌರವ ನೀಡುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಲೋಕಸಭೆ ಚುನಾವಣೆಯಲ್ಲಿ ಮತದಾರರು ನೀಡಿರುವ ಆದೇಶವನ್ನು ಅರಗಿಸಿಕೊಳ್ಳಲು ಸಾಧ್ಯವಾಗದೆ ವಿರೋಧ ಪಕ್ಷಗಳ ನಾಯಕರು ಅಳುತ್ತಿದ್ದಾರೆ’ ಎಂದು ಜೋಶಿ ಲೇವಡಿ ಮಾಡಿದ್ದಾರೆ.

ಇಂದು ನಡೆದ ನೀತಿ ಆಯೋಗದ ಸಭೆಯಲ್ಲಿ ಮಾತನಾಡಲು ಸಮಯ ನಿರಾಕರಿಸಿದ್ದನ್ನು ಪ್ರತಿಭಟಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆಯಿಂದ ಹೊರನಡೆದಿದ್ದಾರೆ. ಕೇವಲ ಐದು ನಿಮಿಷ ಮಾತನಾಡಿದ ಬಳಿಕ ನನ್ನನ್ನು ತಡೆದಿದ್ದಾರೆ ಎಂದು ಅವರು ಹೇಳಿದ್ದಾರೆ. ಜತೆಗೆ ಕೇಂದ್ರ ಬಜೆಟ್ ಅನ್ನೂ ಟೀಕಿಸಿರುವ ಅವರು, ತಾರತಮ್ಯದ ಬಜೆಟ್ ಎಂದು ಕಿಡಿಕಾರಿದ್ದಾರೆ.

ಮಮತಾ ಬ್ಯಾನರ್ಜಿಯ ಆರೋಪವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರೆ ಬಿಜೆಪಿ ನಾಯಕರು ತಳ್ಳಿಹಾಕಿದ್ದಾರೆ.
.ನೀತಿ ಆಯೋಗದ ಸಭೆ ಬಹಿಷ್ಕರಿಸಿ ಹೊರನಡೆದ ಮಮತಾ ಬ್ಯಾನರ್ಜಿ.ರೂಪಾಯಿ ಕುಸಿಯುತ್ತಿಲ್ಲ, ಡಾಲರ್ ಬಲವಾಗುತ್ತಿದೆ ಎಂಬ ನಿರ್ಮಲಾ ಹೇಳಿಕೆ ಟ್ರೋಲ್!.ರಾಜಕೀಯ ಲಾಭ ಪಡೆಯಲು ನೀತಿ ಆಯೋಗ ಸಭೆಯಿಂದ ಹೊರನಡೆದ ಮಮತಾ: ಬಿಜೆಪಿ.YSRCPಗೆ ಮತ ಹಾಕಿದ್ದಕ್ಕಾಗಿ ಮಾಜಿ ಸೈನಿಕನ ಕುಟುಂಬಕ್ಕೆ ಟಿಡಿಪಿ ಕಿರುಕುಳ: ಆರೋಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.