ನಾಸಿಕ್: ರೇವ್ ಪಾರ್ಟಿ ನಡೆಯುತ್ತಿದ್ದಎರಡು ವಿಲ್ಲಾಗಳ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ 12 ಯುವತಿಯರು ಸೇರಿದಂತೆ 22 ಜನರನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಇಗತ್ಪುರಿ ಪಟ್ಟಣದ ಹೊರವಲಯದಲ್ಲಿರುವ ಎರಡು ಖಾಸಗಿ ವಿಲ್ಲಾಗಳಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಆಧರಿಸಿ ಪೊಲೀಸರು ಭಾನುವಾರ ತಡ ರಾತ್ರಿ ದಾಳಿ ನಡೆಸಿದ್ದಾರೆ.

ಬಂಧಿತ 12 ಮಹಿಳೆಯರ ಪೈಕಿ ನಾಲ್ವರು ಸಿನಿಮಾರಂಗದ ಸಂಪರ್ಕ ಹೊಂದಿದ್ದರೆ,ಒರ್ವ ಯುವತಿ ‘ಬಿಗ್ ಬಾಸ್ ರಿಯಾಲಿಟಿ ಶೋ‘ನಲ್ಲಿ ಭಾಗವಹಿಸಿದ್ದ ಮಾಜಿ ಸ್ಪರ್ಧಿ ಎಂದು ಗುರುತಿಸಲಾಗಿದೆ. ರೇವ್ ಪಾರ್ಟಿ ಸ್ಥಳದಿಂದ ಅಪಾರ ಪ್ರಮಾಣದ ಡ್ರಗ್ಸ್ ಹಾಗೂ ಹುಕ್ಕಾಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಾಸಿಕ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಪಾಟೀಲ್ ತಿಳಿಸಿದ್ದಾರೆ.

ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ 10 ಪುರುಷರು ಹಾಗೂ 12 ಮಹಿಳೆಯರು ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿದೆ. ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪಾರ್ಟಿ ಆಯೋಜಿಸಿದ್ದ ಸಂಘಟಕರು ನಾಪತ್ತೆಯಾಗಿದ್ದು ಅವರ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿತ್ರರಂಗದ ನಂಟು ಹೊಂದಿರುವ ಯುವತಿಯರು ಹಾಗೂ ಬಿಗ್ ಬಾಸ್‌ನ ಮಾಜಿ ಸ್ಪರ್ಧಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.