ಲಖನೌ: ‘ರಾಮ ಜನ್ಮಭೂಮಿ ವಿವಾದ ಕುರಿತ ತೀರ್ಪು ಕಾನೂನು ಆಧಾರದ ಮೇಲೆ ನೀಡಲಾಗಿದೆ, ಧರ್ಮದ ಆಧಾರದ ಮೇಲೆ ಅಲ್ಲ’ ಎಂದು ಸುಪ್ರೀಂಕೋರ್ಟ್ನ ಹಿಂದಿನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ಹೇಳಿದ್ದಾರೆ.

ರಾಜ್ಯಸಭಾ ಸದಸ್ಯರೂ ಆಗಿರುವ ಅವರು, ವಾರಾಣಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ನೀಡಿದ ತೀರ್ಪು ನನ್ನ ವೈಯಕ್ತಿಕ ನಿರ್ಧಾರವಾಗಿರಲಿಲ್ಲ. ಅದು ಸುಪ್ರೀಂಕೋರ್ಟ್ನ ನಿರ್ಧಾರವಾಗಿತ್ತು’ ಎಂದು ಅವರು ಹೇಳಿದರು.

‘ಪೀಠದಲ್ಲಿದ್ದ ಐವರು ನ್ಯಾಯಮೂರ್ತಿಗಳು 3–4 ತಿಂಗಳ ಅವಧಿಯಲ್ಲಿ 900 ಪುಟಗಳ ತೀರ್ಪು ಬರೆದಿದ್ದಾರೆ. ದೇಶದ ಸಂವಿಧಾನ ಹಾಗೂ ಕಾನೂನಿನ ಆಧಾರದ ಮೇಲೆ ಈ ತೀರ್ಪನ್ನು ನೀಡಲಾಗಿತ್ತೇ ಹೊರತು ಧರ್ಮ ಆಧರಿಸಿ ಅಲ್ಲ’ ಎಂದ ಅವರು, ‘ಒಬ್ಬ ನ್ಯಾಯಾಧೀಶಗೆ ಸಂವಿಧಾನವೇ ಧರ್ಮವಾಗಿರುತ್ತದೆ’ ಎಂದು ಹೇಳಿದರು.

ಗೊಗೊಯಿ ಅವರು ನಿವೃತ್ತಿ ಹೊಂದಿದ ಆರು ತಿಂಗಳ ನಂತರ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಅವರ ಈ ನಡೆಗೆ ವಿರೋಧ ಪಕ್ಷಗಳಿಂದ ತೀಕ್ಷ್ಣ ಟೀಕೆಗಳು ವ್ಯಕ್ತವಾಗಿದ್ದವು. ಚುನಾವಣೆಗೆ ಸ್ಪರ್ಧಿಸುವ ತಮ್ಮ ನಿರ್ಧಾರವನ್ನು ಆಗ ಅವರು ಸಮರ್ಥಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.