ಲಖನೌ: ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಬರೆದ ಉತ್ತರದ ಗುಣಮಟ್ಟದ ಆಧಾರದ ಮೇಲೆ ಅವರಿಗೆ ಅಂಕಗಳನ್ನು ನೀಡಲಾಗುತ್ತದೆ. ಆದರೆ ಇಲ್ಲೊಂದು ವಿಶ್ವವಿದ್ಯಾಲಯದಲ್ಲಿ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್’ ಎಂದು ಮತ್ತು ಕ್ರಿಕೆಟ್ ಆಟಗಾರರ ಹೆಸರುಗಳನ್ನು ಬರೆದಿರುವ ಹಲವಾರು ವಿದ್ಯಾರ್ಥಿಗಳಿಗೆ ಮೌಲ್ಯಮಾಪಕರು ಅಂಕಗಳನ್ನು ನೀಡಿದ್ದಾರೆ. ಇಂಥದ್ದೊಂದು ಘಟನೆ ನಡೆದಿರುವುದು ಉತ್ತರ ಪ್ರದೇಶದ ಜೌನ್‌ಪುರದಲ್ಲಿರುವ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ ವಿಶ್ವವಿದ್ಯಾಲಯದಲ್ಲಿ.

ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀರಾಮ್’ ಮತ್ತು ಕ್ರಿಕೆಟಿಗರ ಹೆಸರುಗಳನ್ನು ಬರೆದ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿರುವ ಇಬ್ಬರು ಶಿಕ್ಷಕರನ್ನು ವಜಾಗೊಳಿಸಲು ವಿಶ್ವವಿದ್ಯಾಲಯ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ದಿವ್ಯಾಂಶು ಸಿಂಗ್ ಅವರು ಸಲ್ಲಿಸಿದ ಆರ್‌ಟಿಐ ಅರ್ಜಿ ಆಧಾರದ ಮೇರೆಗೆ ಫಾರ್ಮಸಿ ಕೋರ್ಸ್‌ನ ನಾಲ್ವರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮರುಪರಿಶೀಲಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ಅಲ್ಲಲ್ಲಿ ‘ಜೈ ಶ್ರೀರಾಮ್’ ಘೋಷಣೆ ಮತ್ತು ಭಾರತೀಯ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇವರಿಗೆ ಮೌಲ್ಯಮಾಪಕರು ಶೇ 50ಕ್ಕಿಂತ ಹೆಚ್ಚು ಅಂಕಗಳನ್ನು ನೀಡಿದ್ದಾರೆ. ಪರಿಶೀಲನೆ ಬಳಿಕ ವಿದ್ಯಾರ್ಥಿಗಳಿಗೆ ಶೂನ್ಯ ಅಂಕಗಳನ್ನು ನೀಡಲಾಗಿದೆ. ಪ್ರಕರಣದ ಕುರಿತು ರಾಜಭವನ ತನಿಖೆಗೆ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.