ಬುಧವಾರ, 3 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಂಧನ ಪ್ರಶ್ನಿಸಿ ಕೇಜ್ರಿವಾಲ್‌ ಹೈಕೋರ್ಟ್‌ಗೆ: ನಾಳೆ ವಿಚಾರಣೆ

Published 1 ಜುಲೈ 2024, 14:28 IST
Last Updated 1 ಜುಲೈ 2024, 14:28 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ ಮಂಗಳವಾರ ನಡೆಸಲಿದೆ.

ನ್ಯಾಯಮೂರ್ತಿ ನೀನಾ ಬನ್ಸಾಲ್‌ ಕೃಷ್ಣ ಅವರು ಈ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ. 

ಸಿಬಿಐ ತಮ್ಮನ್ನು ಬಂಧಿಸಿರುವುದು ಹಾಗೂ ವಿಚಾರಣಾ ನ್ಯಾಯಾಲಯವು ತಮ್ಮನ್ನು 3 ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿ ಜೂ.26ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೇಜ್ರಿವಾಲ್‌ ಅವರು ಸೋಮವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೂ. 27ರಂದು ಕೇಜ್ರಿವಾಲ್‌ ಅವರನ್ನು ಸಿಬಿಐ ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT