ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣ ಸಂಬಂದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ಪ್ರಕರಣ ಸಂಬಂಧ ಇ.ಡಿ ಜಾರಿಗೊಳಿಸಿದ 9ನೇ ಸಮನ್ಸ್ ಇದಾಗಿದೆ. ಹಿಂದಿನ ಸಮನ್ಸ್ಗಳನ್ನು ಕಾನೂನುಬಾಹಿರ ಎಂದು ಕರೆದಿದ್ದ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ , ಕೇಜ್ರಿವಾಲ್ ಹೇಳಿಕೆಯನ್ನು ದಾಖಲಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.
.ಸಮನ್ಸ್ ಕಾನೂನುಬಾಹಿರ, ಆದರೆ ಇ.ಡಿ ವಿಚಾರಣೆಗೆ ಹಾಜರಾಗಲು ಸಿದ್ಧ: ಕೇಜ್ರಿವಾಲ್.
ದೂರು ದಾಖಲಿಸಿದ್ದ ಇ.ಡಿ:

ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ಗೆ ಇ.ಡಿ ಅಧಿಕಾರಿಗಳು 8 ಸಮನ್ಸ್ಗಳನ್ನು ಜಾರಿಗೊಳಿಸಿದ್ದರು. ಆದರೆ, ಅವರು ವಿಚಾರಣೆಗೆ ಗೈರಾಗಿದ್ದರು. ಹಾಗಾಗಿ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಇ.ಡಿ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯಕ್ಕೆ ಎರಡು ದೂರು ದಾಖಲಿಸಿತ್ತು.

ಜಾಮೀನು ಮಂಜೂರು:

ಪ್ರಕರಣದಲ್ಲಿ ಇ.ಡಿ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.

ಇದೇ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಹೈದರಾಬಾದ್ನಲ್ಲಿ ಬಂಧಿಸಿದೆ.
.ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ಗೆ ಜಾಮೀನು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.