ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳು ಯಾವಾಗಲೂ ಬಿಜೆಪಿ ಪರವಾಗಿಯೇ ಇರುತ್ತವೆ ಎಂದು ಅಮ್ ಆದ್ಮಿ (ಎಎಪಿ) ಪಕ್ಷದ ನಾಯಕ ರಾಘವ್ ಚಡ್ಡಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿ ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ದೇಶದ ಯಾವುದೇ ಚುನಾವಣೆ ಬಳಿಕ ನಡೆಯುವ ಮತಗಟ್ಟೆ ಸಮೀಕ್ಷೆಗಳು ಯಾವಾಗಲೂ ಬಿಜೆಪಿಯ ಪರವಾಗಿಯೇ ಇರುತ್ತವೆ ಎಂದು ಹೇಳಿದ್ದಾರೆ.

ಗುಜರಾತ್ನಲ್ಲಿ ಎಎಪಿ ಕಳಪೆ ಪ್ರದರ್ಶನ ನೀಡಿದೆ ಎಂಬ ಮಾಧ್ಯಮಗಳ ವರದಿಗೆ ಅವರು ಪ್ರತಿಕ್ರಿಯಸಿ ಮಾತನಾಡಿದರು. ಗುಜರಾತ್ನಲ್ಲಿ ಹಾಗೂ ದೆಹಲಿ ಪಾಲಿಕೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ನೀಡಿರುವ ಸ್ಥಾನಗಳಿಗಿಂತಲೂ ನಾವು ಹೆಚ್ಚಿನ ಸ್ಥಾನಗಳನ್ನು ಪಡೆಯುವ ಮೂಲಕ ಉತ್ತಮ ಸಾಧನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಎಎಪಿ ಮತದಾರರು ಶಾಂತ ಸ್ವಭಾವದವರು, ಅವರು ಚುನಾವಣೋತ್ತರ ಸಮೀಕ್ಷೆಗಳಲ್ಲಿ ಭಾಗವಹಿಸಲು ಇಷ್ಟಪಡುವುದಿಲ್ಲ ಎಂದು ರಾಘವ್ ಹೇಳಿದರು.

ಗುಜರಾತ್ನಲ್ಲಿ ಎಎಪಿ ಇದೇ ಮೊದಲ ಬಾರಿಗೆ ಸ್ಪರ್ಧೆ ಮಾಡಿದೆ. ಎಎಪಿ 10 ರಿಂದ 20 ಸ್ಥಾನಗಳನ್ನು ಪಡೆಯಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಆದರೆ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಎಎಪಿ 90ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.