ನವದೆಹಲಿ: ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ ಭಾರತಕ್ಕೆ ಆಗಮಿಸಿದ್ದಾರೆ.

ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ, ವಿಶೇಷವಾಗಿ ಆರ್ಥಿಕ ಮತ್ತು ವ್ಯಾಪಾರಕ್ಕೆ ಸಂಬಂಧಿಸಿದ ವಿಷಯಗಳಿಗೆ ಈ ಭೇಟಿಯಲ್ಲಿ ಆದ್ಯತೆ ಸಿಗುವ ನಿರೀಕ್ಷೆ ಇದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಕ್ರಮಸಿಂಘೆ ಅವರ ನಡುವೆ ಶುಕ್ರವಾರ ಸಭೆ ನಿಗದಿಯಾಗಿದೆ. ಎರಡೂ ರಾಷ್ಟ್ರಗಳ ಸ್ನೇಹ ಸಂಬಂಧಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ.

ಶ್ರೀಲಂಕಾ ಕಳೆದ ವರ್ಷ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿತ್ತು. ಇದಾದ ನಂತರ ಲಂಕಾ ಅಧ್ಯಕ್ಷರು ಭಾರತಕ್ಕೆ ಕೈಗೊಂಡ ಮೊದಲ ಭೇಟಿ ಇದಾಗಿದೆ. ಸಂಕಷ್ಟಕ್ಕೆ ಸಿಲುಕಿದ್ದ ಶ್ರೀಲಂಕಾಕ್ಕೆ ಭಾರತವು ಸುಮಾರು ₹32.83 ಸಾವಿರ ಕೋಟಿ ಮೌಲ್ಯದ ಆರ್ಥಿಕ ಸಹಾಯ ಮಾಡಿ ನೆರವಿನ ಹಸ್ತ ಚಾಚಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.