ನವದೆಹಲಿ: ವಿದೇಶಾಂಗ ಖಾತೆ ಸಚಿವ ಸುಬ್ರಮಣ್ಯಂ ಜೈಶಂಕರ್ ಸಂಸತ್ ಭವನದಲ್ಲಿ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಸೋಮವಾರ ಪಕ್ಷಕ್ಕೆ ಸೇರ್ಪಡೆಗೊಂಡರು.

ಎರಡನೇ ಬಾರಿಗೆ ಅಧಿಕಾರ ಹಿಡಿದಿದ್ದ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಜೈಶಂಕರ್ ವಿದೇಶಾಂಗ ಸಚಿವರಾಗಿದ್ದಾರೆ. ಸುಷ್ಮಾ ಸ್ವರಾಜ್ ಅವರು ವಿದೇಶಾಂಗ ಖಾತೆ ಸಚಿವರಾಗಿದ್ದ ಸಂದರ್ಭದಲ್ಲಿ ಜೈಶಂಕರ್ ವಿದೇಶಾಂಗ ಕಾರ್ಯದರ್ಶಿಯಾಗಿದ್ದರು. ಈ ಹಿಂದೆ ಇವರು ಅಮೇರಿಕದಲ್ಲಿ ಭಾರತೀಯ ರಾಯಭಾರಿಯಾಗಿಯೂ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಜೈಶಂಕರ್ ಅವರು ದೆಹಲಿಯಸೇಂಟ್ ಸ್ಟೀಫೆನ್ಸ್ ಕಾಲೇಜಿನ ಪದವಿಧರರಾಗಿದ್ದಾರೆ. ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಜವಾಹರ್ ಲಾಲ್ ನೆಹರು ವಿಶ್ವ ವಿದ್ಯಾಲಯದಿಂದ ‘ಅಂತರರಾಷ್ಟ್ರೀಯ ಸಂಬಂಧಗಳು’ ವಿಷಯದಲ್ಲಿ ಎಮ್ಫಿಲ್ ಮತ್ತು ಪಿಎಚ್ಡಿ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.