ಮುಂಬೈ: ರಾಯ್ಬರೇಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಾಹುಲ್ ಗಾಂಧಿ ಅವರನ್ನು ‘ರಾಜಕೀಯ ಪ್ರವಾಸಿ’ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಕರೆದಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಅವರು ಸುತ್ತಾಡಲಿ, ಪ್ರವಾಸಿಗರನ್ನು ಎಲ್ಲೆಡೆ ಸ್ವಾಗತಿಸಲಾಗುತ್ತದೆ. ಆದರೆ, ಶಾಶ್ವತವಾಗಿ ನೆಲೆಸಲು ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕಳೆದ ಎರಡು ದಶಕಗಳಿಂದ ರಾಯ್ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಅಮೇಠಿ ಹಾಗೂ ವಯನಾಡ್ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ, ವಯನಾಡ್ನಲ್ಲಿ ಭಾರಿ ಅಂತರದಿಂದ ಗೆದ್ದಿದ್ದರು. ಆದರೆ, ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸೋಲು ಅನುಭವಿಸಿದ್ದರು.

ರಾಯ್ಬರೇಲಿಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.