ಈರೋಡ್ (ತಮಿಳುನಾಡು): ಸತ್ಯಮಂಗಲ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಆನೆಯೊಂದು ರೈತನನ್ನು ತುಳಿದು ಸಾಯಿಸಿದೆ.

ಮೃತ ರೈತನನ್ನು ಮಾರನ್(55) ಎಂದು ಗುರುತಿಸಲಾಗಿದೆ.

ಜಮೀನಿನಲ್ಲಿ ಮೆಕ್ಕೆಜೋಳ ಬೆಳೆದಿದ್ದ ಮಾರನ್, ಕಾಡುಪ್ರಾಣಿಗಳಿಂದ ಬೆಳೆಯನ್ನು ರಕ್ಷಿಸಿಕೊಳ್ಳಲು ರಾತ್ರಿ ವೇಳೆ ಕಾವಲು ಕಾಯುತ್ತಿದ್ದರು. ಭಾನುವಾರ ತಡರಾತ್ರಿ ಮೆಕ್ಕೆಜೋಳದ ಹೊಲಕ್ಕೆ ನುಗ್ಗಿದ್ದ ಆನೆಯನ್ನು ಓಡಿಸಲು ಹೋದಾಗ, ಆನೆಯು ಅವರನ್ನು ತುಳಿದು ಸಾಯಿಸಿದೆ ಎಂದು ಅರಣ್ಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಅಕ್ಕಪಕ್ಕದ ರೈತರು ಕಿರುಚಾಟ ಕೇಳಿಸಿಕೊಂಡು ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲಿ ಮಾರನ್ ಮೃತದೇಹ ಸಿಕ್ಕಿದ್ದು, ಅರಣ್ಯ ಅಧಿಕಾರಿಗಳಿಗೆ ಹಾಗೂ ಕಡಂಬೂರು ಠಾಣಾ ಪೊಲೀಸರಿಗೆ ರೈತರು ಮಾಹಿತಿ ನೀಡಿದ್ದಾರೆ.

‘ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸತ್ಯಮಂಗಲ ಆಸ್ಪತ್ರೆಗೆ ಕಳುಹಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.