ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ರೈತರಿಗೆ ಪ್ರತಿಭಟನೆ ನಡೆಸುವ ಹಕ್ಕಿದೆ, ಆದರೆ, ಅನಿರ್ದಿಷ್ಟ ಕಾಲ ರಸ್ತೆ ತಡೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ.

ಕಾನೂನಿನ ಸವಾಲು ಇದ್ದಾಗಲೂ ರೈತರ ಪ್ರತಿಭಟಿಸುವ ಹಕ್ಕಿಗೆ ನ್ಯಾಯಾಲಯ ವಿರುದ್ಧವಾಗಿಲ್ಲ. ಆದರೆ, ಅಂತಿಮವಾಗಿ ಕೆಲವು ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದು ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ಪೀಠವು ಅಭಿಪ್ರಾಯಪಟ್ಟಿದೆ.

‘ಯಾವುದೇ ರೀತಿಯ ಚಳವಳಿ ನಡೆಸುವ ಹಕ್ಕನ್ನು ರೈತರು ಹೊಂದಿರಬಹುದು. ಆದರೆ, ರಸ್ತೆಗಳನ್ನು ಈ ರೀತಿ ನಿರ್ಬಂಧಿಸಬಾರದು. ಜನರಿಗೆ ರಸ್ತೆಗಳಲ್ಲಿ ಸಂಚರಿಸುವ ಹಕ್ಕಿದೆ. ಅದನ್ನು ತಡೆಯಲು ಆಗುವುದಿಲ್ಲ’ ಎಂದು ಪೀಠವು ಹೇಳಿದೆ.

ಪ್ರಕರಣದಲ್ಲಿ ಕಕ್ಷಿದಾರರಾಗಿರುವ ರೈತ ಸಂಘಗಳಿಗೆ ಈ ಕುರಿತು ಮೂರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿದ್ದು ವಿಚಾರಣೆಯನ್ನು ಡಿಸೆಂಬರ್ 7 ರಂದು ನಿಗದಿಪಡಿಸಿದೆ.

ನೋಯ್ಡಾ ನಿವಾಸಿ ಮೊನಿಕ್ಕಾ ಅಗರ್ವಾಲ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ರೈತರು ಕರೆ ನೀಡಿರುವ ರಸ್ತೆ ತಡೆಯಿಂದಾಗಿ ದೈನಂದಿನ ಪ್ರಯಾಣದಲ್ಲಿ ತೊಂದರೆಯುಂಟಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.