ನವದೆಹಲಿ: ನರೇಲ ಕೈಗಾರಿಕಾ ಪ್ರದೇಶದಲ್ಲಿರುವ ಆಹಾರ ತಯಾರಿಕಾ ಘಟಕದಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ಯಾಮ್ (24), ರಾಮ್ ಸಿಂಗ್ (30) ಮತ್ತು ಬೀರ್‌ಪಾಲ್ (42) ಮೃತರು.

'ಶ್ಯಾಮ್ ಕೃಪಾ ಫುಡ್ಸ್' ಪ್ರೈವೇಟ್ ಲಿಮಿಟೆಡ್‌ನಲ್ಲಿ ದುರಂತ ಸಂಭವಿಸಿದೆ. ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿರುವ ವಿಷಯ ಬೆಳಗಿನ ಜಾವ 3.35ಕ್ಕೆ ತಿಳಿಯಿತು. ಇಡೀ ಘಟಕವನ್ನು ಬೆಂಕಿ ಆವರಿಸಿದ್ದರಿಂದ, ಕೆಲವು ಕಾರ್ಮಿಕರು ಒಳಗೇ ಸಿಲುಕಿಕೊಂಡಿದ್ದರು ಎಂದು ಅವರು ಪೊಲೀಸರು ಹೇಳಿದ್ದಾರೆ.

9 ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ಮೂವರು ಮೃತಪಟ್ಟಿದ್ದಾರೆ. ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅನಿಲ ಸೋರಿಕೆಯಿಂದ ಈ ದುರಂತ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ಅಂದಾಜಿಸಲಾಗಿದೆ. ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.