ನವದೆಹಲಿ: ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತ್ರಿ ಯೋಜನೆಯಾದ ನರೇಗಾಕ್ಕೆ 2023–24ನೇ ಸಾಲಿನ ಬಜೆಟ್ನಲ್ಲಿ ಕೇಂದ್ರ ಸರ್ಕಾರ ₹60 ಸಾವಿರ ಕೋಟಿ ಮೀಸಲಿಟ್ಟಿದ್ದು, ಹೆಚ್ಚುವರಿಯಾಗಿ ₹10 ಸಾವಿರ ಕೋಟಿಯನ್ನು ಆರ್ಥಿಕ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದೆ.

ಈ ವಿಷಯವನ್ನು ಲೋಕಸಭೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ರಾಜ್ಯ ಸಚಿವೆ ಸಾದ್ವಿ ನಿರಂಜನ ಜ್ಯೋತಿ ಅವರು ಮಂಗಳವಾರ ಉತ್ತರ ರೂಪದಲ್ಲಿ ತಿಳಿಸಿದರು.

‘ಪ್ರಸಕ್ತ ಬಜೆಟ್ನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ, ಸಾಧನ ಹಾಗೂ ನಿರ್ವಹಣೆಗಾಗಿ ₹66,629 ಕೋಟಿ ಹಣವನ್ನು ನ. 29ರವರೆಗೂ ನೀಡಲಾಗಿದೆ. ಹೆಚ್ಚುತ್ತಿರುವ ಉದ್ಯೋಗ ಬೇಡಿಕೆಯನ್ನು ಪರಿಗಣಿಸಿ ಇದೀಗ ಆರ್ಥಿಕ ಇಲಾಖೆಯು ತುರ್ತು ನಿಧಿಯಿಂದ ₹10 ಸಾವಿರ ಕೋಟಿಯನ್ನು ನೀಡಿದೆ’ ಎಂದರು.

ಇದಕ್ಕೂ ಮೊದಲು ಸಂದರ್ಶನವೊಂದರಲ್ಲಿ ಮಾಹಿತಿ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್, ‘ನರೇಗಾ ಯೋಜನೆಗಾಗಿ ಕೇಂದ್ರ ಸರ್ಕಾರವು ಹೆಚ್ಚುವರಿಯಾಗಿ ₹28 ಸಾವಿರ ಕೋಟಿ ಮಂಜೂರು ಮಾಡಿದೆ. ಇದು ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು’ ಎಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.