ರಾಯ್ಪುರ: ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮತ್ತು ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ವಿರುದ್ಧ 'ದ್ವೇಷಪೂರಿತ ಹಾಗೂ ಪ್ರಚೋದನಕಾರಿ' ಹೇಳಿಕೆ ನೀಡಿದ ಆರೋಪದ ಮೇಲೆ ಛತ್ತೀಸ್ಗಡ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ಸಂಜೆ ರಾಯ್ಪುರದಲ್ಲಿ ನಡೆದ ಎರಡು ದಿನಗಳ ಧರ್ಮ ಸಂಸದ್ ಸಮ್ಮೇಳನದಲ್ಲಿ ಕಾಳಿಚರಣ್, ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಪದವನ್ನು ಬಳಸಿದ್ದರು ಮತ್ತು ಧರ್ಮದ ರಕ್ಷಣೆಗಾಗಿ ಕಟ್ಟಾ ಹಿಂದೂ ನಾಯಕನನ್ನು ಸರ್ಕಾರದ ಮುಖ್ಯಸ್ಥನನ್ನಾಗಿ ಆಯ್ಕೆ ಮಾಡುವಂತೆ ಜನರಲ್ಲಿ ಕೇಳಿಕೊಂಡಿದ್ದರು.

ಇವರ ಹೇಳಿಕೆಯು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಾಯಕರನ್ನು ಕೆರಳುವಂತೆ ಮಾಡಿತ್ತು.

ಕಾಂಗ್ರೆಸ್ ನಾಯಕ ಪ್ರಮೋದ್ ದುಬೆ ನೀಡಿರುವ ದೂರಿನ ಆಧಾರದ ಮೇಲೆ ಕಾಳಿಚರಣ್ ವಿರುದ್ಧ ಭಾನುವಾರ ರಾತ್ರಿ ತಿಕ್ರಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾಳಿಚರಣ್, 'ರಾಜಕೀಯದ ಮೂಲಕ ರಾಷ್ಟ್ರವನ್ನು ವಶಪಡಿಸಿಕೊಳ್ಳುವುದು ಇಸ್ಲಾಂನ ಗುರಿಯಾಗಿದೆ. ನಮ್ಮ ಮುಂದೆಯೇ ಅವರು 1947 ರಲ್ಲಿ (ವಿಭಜನೆಯನ್ನು ಉಲ್ಲೇಖಿಸಿ) ದೇಶಗಳನ್ನು ವಶಪಡಿಸಿಕೊಂಡರು. ಅವರು ಮೊದಲು ಇರಾನ್, ಇರಾಕ್ ಮತ್ತು ಅಫ್ಗಾನಿಸ್ತಾನವನ್ನು ವಶಪಡಿಸಿಕೊಂಡರು. ಬಳಿಕ ಅವರು ರಾಜಕೀಯದ ಮೂಲಕವೇ ಬಾಂಗ್ಲಾದೇಶ ಮತ್ತು ಪಾಕಿಸ್ತಾನವನ್ನು ವಶಪಡಿಸಿಕೊಂಡರು. ಗಾಂಧಿಯನ್ನು ಕೊಂದ ನಾಥೂರಾಂ ಗೋಡ್ಸೆಗೆ ನಾನು ನಮಸ್ಕರಿಸುತ್ತೇನೆ' ಎಂದಿದ್ದರು.

ಇದನ್ನು ಖಂಡಿಸಿದ್ದ ಕಾಂಗ್ರೆಸ್ ಸಂವಹನ ವಿಭಾಗದ ಮುಖ್ಯಸ್ಥ ಸುಶೀಲ್ ಆನಂದ್ ಶುಕ್ಲಾ, 'ಮಹಾತ್ಮ ಗಾಂಧಿ ವಿರುದ್ಧ ಇಂತಹ ಹೇಳಿಕೆಗಳನ್ನು ನೀಡುವುದು ಖಂಡನೀಯ. ಕಾಳಿಚರಣ್ ಮೊದಲು ಅವರು ಸಂತನೆಂದು ಸಾಬೀತುಪಡಿಸಲಿ' ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.