ಚಂಡೀಗಢ (ಪಿಟಿಐ): ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರ ಪಟಿಯಾಲ ಮನೆಯಲ್ಲಿ ಭದ್ರತಾ ಲೋಪ ಉಂಟಾಗಿದೆ ಎನ್ನಲಾಗಿದ್ದು, ಪಂಜಾಬ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಭಾನುವಾರ ಮನೆಯ ಮಹಡಿಯ ಮೇಲೆ ಬೂದು ಬಣ್ಣದ ಬಟ್ಟೆಯನ್ನು ಸುತ್ತಿಕೊಂಡ ವ್ಯಕ್ತಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ, ಮನೆಯ ಕೆಲಸದಾತ ಎಚ್ಚರಿಸುವಷ್ಟರಲ್ಲಿ ಅವನು ತಪ್ಪಿಸಿಕೊಂಡಿದ್ದಾನೆ ಎಂದು ಸಿಧು ಹೇಳಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ, ಈಗಾಗಲೇ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗಿದೆ ಎಂದು ಪಟಿಯಾಲ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಈ ಬಗ್ಗೆ ಈಗಾಗಲೇ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಈ ರೀತಿಯ ಭದ್ರತಾ ಲೋಪ ಪಂಜಾಬ್ ಪರವಾಗಿ ನಾನು ಧ್ವನಿ ಎತ್ತುವುದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಸಿಧು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.