ಕೋಲ್ಕತ್ತ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಬಿಧಾನನಗರ ಪೊಲೀಸರು ಬುಧವಾರ ಎಫ್ಐಆರ್ ದಾಖಲಿಸಿದ್ದಾರೆ.

‘ಅಕ್ಟೋಬರ್ 27ರಂದು ಸಾಲ್ಟ್ ಲೇಕ್ ಪ್ರದೇಶದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಿಥನ್ ಚಕ್ರವರ್ತಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಆ ಸಂಬಂಧ ಎಫ್ಐಆರ್ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕುರಿತು ನಡೆದ ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಉಪಸ್ಥಿತರಿದ್ದರು.

ಈ ಕುರಿತು ಮಿಥುನ್ ಅವರು ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ. ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಸುಕಾಂತ ಮಜುಂದಾರ್, ‘ಇದು ಸೇಡಿನ ರಾಜಕಾರಣ. ಮಿಥುನ್ ಅವರ ಭಾಷಣದಲ್ಲಿ ಪ್ರಚೋದನಾರಿ ಅಂಶವೇ ಇರಲಿಲ್ಲ. ಪೊಲೀಸರು ಇದನ್ನು ರಾಜಕೀಯ ಸಾಧನವಾಗಿ ಬಳಸಿಕೊಂಡು, ಬೆದರಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

‘2026ರ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಸಿಂಹಾಸನ ಬಿಜೆಪಿಗೆ ದೊರೆಯುತ್ತಿದೆ. ಈ ಗುರಿ ಸಾಧನೆಗೆ ನಾವು ಎಲ್ಲವನ್ನೂ ಮಾಡುತ್ತೇವೆ’ ಎಂದು ಮಿಥುನ್ ಭಾಷಣದಲ್ಲಿ ಹೇಳಿದ್ದರು.

ಲೋಕಸಭಾ ಚುನಾವಣೆ ವೇಳೆ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ಅವರು ಕೋಮವಾದಿ ಹೇಳಿಕೆಗಳನ್ನು ನೀಡಿದ್ದರು ಎಂದೂ ಉಲ್ಲೇಖಿಸಿದ್ದ ಮಿಥುನ್, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದ ಮತದಾರರನ್ನು ಹೆದರಿಸಿ, ಮತದಾನದಿಂದ ದೂರವಿರುವಂತೆ ಮಾಡಲು ಯಾರೂ ಯತ್ನಿಸಬಾರದು ಎಂದು ಎಚ್ಚರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.