ಡಿಯೋರಿಯಾ (ಯುಪಿ): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ನಿಂದನಾತ್ಮಕ ಭಾಷೆ ಬಳಸಿ ಹಾಗೂ ಕೊಲೆ ಬೆದರಿಕೆ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹರಿದಾಡುತ್ತಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಜತೆಗೆ ಆರೋಪಿ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಅಜಿತ್ ಯಾದವ್ ಎಂಬ ಯುವಕ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮುಖ್ಯಮಂತ್ರಿ ಯೋಗಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿರುವ ಸಂದೇಶ ಬುಧವಾರ ಮಧ್ಯ ರಾತ್ರಿಯಿಂದ ಹರಿದಾಡುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ.

‘ಬೆದರಿಕೆ ಸಂದೇಶ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಬುಧವಾರ ತಡರಾತ್ರಿ 3 ಗಂಟೆ ಸುಮಾರಿಗೆ ರುದ್ರಪುರ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಯಾದವ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ಮುಂದುವರಿದಿದ್ದು, ಆರೋಪಿ ಪತ್ತೆಗೆ ಬಲೆ ಬೀಸಲಾಗಿದೆ' ಎಂದು ಎಸ್‌ಪಿ ತಿಳಿಸಿದ್ದಾರೆ.
.ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ: ಇಬ್ಬರ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.