ಅಯೋಧ್ಯೆ(ಉತ್ತರ ಪ್ರದೇಶ): ವ್ಯಕ್ತಿಯೊಬ್ಬನನ್ನು ಅಪಹರಿಸಿ, ಹಲ್ಲೆ ನಡೆಸಿದ ಆರೋಪದ ಮೇಲೆ ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್ ಮಗ ಅಜಿತ್ ಪ್ರಸಾದ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ರವಿ ತಿವಾರಿ ಎಂಬವರು ನೀಡಿದ ದೂರಿನನ್ವಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಅಜಿತ್ ವಿರುದ್ಧ ದೂರು ದಾಖಲಾಗಿದೆ.

ಬಿಎನ್ಎಸ್ ಸೆಕ್ಷನ್ 140 (3) (ಅಪಹರಣ), 115 (2) (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 191 (3) (ಮಾರಣಾಂತಿಕ ಹಲ್ಲೆ), 351 (3) (ಜೀವ ಬೆದರಿಕೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮೀನು ಖರೀದಿ ಸಂಬಂಧ ಕಮಿಷನ್ ವಿಚಾರಕ್ಕೆ ಗಲಾಟೆ ನಡೆದಿದೆ. ಅಜಿತ್ ಪ್ರಸಾದ್ ಮತ್ತು ಇತರ ಐವರು ಸೇರಿ ರವಿ ತಿವಾರಿ ಅವರ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿ, ಅಪಹರಣ ಮಾಡಿದ್ದಾರೆ ಎಂದು ಎಫ್ಐಆರ್ ನಲ್ಲಿ ಹೇಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಂದೆ ಅವಧೇಶ್ ಪ್ರಸಾದ್ ಅವರು ಸಂಸದರಾಗಿ ಆಯ್ಕೆಯಾದ ಮೇಲೆ ತೆರವಾಗಿದ್ದ ಮಿಲ್ಕಿಪುರ ವಿಧಾನಸಭಾ ಕ್ಷೇತ್ರದಿಂದ ಅಜಿತ್ ಪ್ರಸಾದ್ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಅದಾಗ್ಯೂ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಸಮಾಜವಾದಿ ಪಕ್ಷ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.