ಪುಣೆ: ನಗರದ ಮಂಡೈ ಮೆಟ್ರೊ ನಿಲ್ದಾಣದ ನೆಲ ಮಹಡಿಯಲ್ಲಿ ಭಾನುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರೊ ನಿಲ್ದಾಣದ ನೆಲ ಮಹಡಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವ ವೇಳೆ ಕಿಡಿ ಬಿದ್ದು ಬೆಂಕಿ ಹೊತ್ತುಕೊಂಡಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಹೇಳಿದ್ದಾರೆ.

ಬೆಂಕಿ ತಗುಲಿರುವ ಬಗ್ಗೆ ದೂರವಾಣಿ ಕರೆ ಬಂದಿತ್ತು. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಇತರರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಸ್ಥಳೀಯ ಸಂಸದ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಮತ್ತು ಸಹಕಾರ ಖಾತೆಯ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮಾತನಾಡಿ, ಸದ್ಯ ಬೆಂಕಿಯನ್ನು ನಂದಿಸಲಾಗಿದೆ. ಮೆಟ್ರೊ ಸೇವೆಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.