ಚೆನ್ನೈ: ಚೆನ್ನೈ ಹೊರವಲಯದಶ್ರೀ ರಾಮಚಂದ್ರ ಮೆಡಿಕಲ್ ಕಾಲೇಜು ಬಳಿಯಿರುವ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು 150ಕ್ಕಿಂತಲೂ ಹೆಚ್ಚುಕಾರುಗಳು ಭಸ್ಮವಾಗಿವೆ.

ಭಾನುವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಒಣಹುಲ್ಲಿಗೆ ಬೆಂಕಿ ಹತ್ತಿಕೊಂಡಿತ್ತು.ಅಗ್ನಿಶಾಮಕ ದಳದ ಹತ್ತು ವಾಹನಗಳು ಬಂದು ಬೆಂಕಿ ನಂದಿಸಿವೆ.

ಖಾಸಗಿ ಕಾರು ಕಂಪನಿಯೊಂದು ಕಳೆದ ಒಂದು ವರ್ಷದಿಂದ ಇಲ್ಲಿ ಕಾರುಗಳನ್ನು ನಿಲ್ಲಿಸಿತ್ತು. ಇಲ್ಲಿ ಕೆಲವು ಹೊಸ ಕಾರುಗಳೂ ಇದ್ದವು.ಬೆಂಕಿ ಸಂಪೂರ್ಣ ನಂದಿದ್ದು, ಇನ್ನೂ ಹೊಗೆ ಬರುತ್ತಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ಎನ್‌ಡಿಟಿವಿಗೆ ಹೇಳಿದ್ದಾರೆ.ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ.

ಶನಿವಾರ ಬೆಂಗಳೂರಿನ ಯಲಹಂಕದ ವಾಯುನೆಲೆಯ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಅನಾಹುತ ಸಂಭವಿಸಿ 300 ಕಾರುಗಳು ಸುಟ್ಟುಹೋದ ಘಟನಯ ಬೆನ್ನಲ್ಲೇ ಚೆನ್ನೈನಲ್ಲಿ ಈ ಅನಾಹುತ ಸಂಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.