ಭುವನೇಶ್ವರ: ಒಡಿಶಾದ ನುವಾಪಾದ ಜಿಲ್ಲೆಯಲ್ಲಿ ದುರ್ಗ್–ಪುರಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಭಯಭೀತರಾಗಿದ್ದರು. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೂರ್ವ ಕರಾವಳಿ ರೈಲ್ವೆ ತಿಳಿಸಿದೆ.

ಗುರುವಾರ ಸಂಜೆ ಖರಿಯಾರ್ ರಸ್ತೆ ನಿಲ್ದಾಣವನ್ನು ತಲುಪುತ್ತಿದ್ದಂತೆ ರೈಲಿನ B3 ಕೋಚ್ನಲ್ಲಿ ಹೊಗೆ ಪತ್ತೆಯಾಗಿದೆ. ‘ಘರ್ಷಣೆ ಮತ್ತು ಬ್ರೇಕ್ಗಳ ಅಪೂರ್ಣ ಬಿಡುಗಡೆಯಿಂದಾಗಿ ಬ್ರೇಕ್ ಪ್ಯಾಡ್ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯು ಬ್ರೇಕ್ ಪ್ಯಾಡ್ಗಳಿಗೆ ಸೀಮಿತವಾಗಿದ್ದು, ಯಾವುದೇ ಹಾನಿಯಾಗಿಲ್ಲ ಎಂದು ರೈಲ್ವೆ ಹೇಳಿದೆ.

ಘಟನೆಯಿಂದಾಗಿ ಪ್ರಯಾಣಿಕರು ಭಯಗೊಂಡಿದ್ದು, ಹೆಚ್ಚಿನವರು ರೈಲಿನಿಂದ ಹೊರಬಂದರು. ಒಂದು ಗಂಟೆಯೊಳಗೆ ಸಮಸ್ಯೆಯನ್ನು ಸರಿಪಡಿಸಲಾಯಿತು ಮತ್ತು ರೈಲು ರಾತ್ರಿ 11 ಗಂಟೆಗೆ ನಿಲ್ದಾಣದಿಂದ ಹೊರಟಿತು ಎಂದು ಪೂರ್ವ ಕರಾವಳಿ ರೈಲ್ವೆ ತಿಳಿಸಿದೆ.

ಒಡಿಶಾದ ಬಾಲೇಶ್ವರ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ ಬೆಂಗಳೂರು–ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್–ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಸರಕು ರೈಲುಗಳ ನಡುವೆ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ 288 ಜನರು ಮೃತಪಟ್ಟಿದ್ದು, 1,100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಭೀಕರ ರೈಲು ದುರಂತದ ನೆನಪುಗಳು ಮಾಸುವ ಮುನ್ನವೆ ಈ ಘಟನೆ ಸಂಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.