ಬೆಂಗಳೂರು: ಸೂರ್ಯನ ಅಧ್ಯಯನಕ್ಕಾಗಿ ಶನಿವಾರ ಉಡಾವಣೆಗೊಂಡು ಭೂಕಕ್ಷೆಯಲ್ಲಿ ಪರಿಭ್ರಮಣ ನಡೆಸುತ್ತಿರುವ ‘ಆದಿತ್ಯ ಎಲ್–1’ ಅನ್ನು ಭಾನುವಾರ ಯಶಸ್ವಿಯಾಗಿ ಎತ್ತರದ ಕಕ್ಷೆಗೆ ಸೇರಿಸಲಾಗಿದೆ.

ಆದಿತ್ಯ ಎಲ್–1 ಉಪಗ್ರಹವು ಆರೋಗ್ಯ ಪೂರ್ಣವಾಗಿದ್ದು, ಸಾಮಾನ್ಯ ಸ್ಥಿತಿಯಲ್ಲೇ ಕಾರ್ಯ ನಿರ್ವಹಿಸುತ್ತಿದೆ. ಸೋಮವಾರ ಇನ್ನೂ ಎತ್ತರದ ಕಕ್ಷೆಗೆ ಸೇರಿಸುವ ಕಾರ್ಯ ನಡೆಯಲಿದೆ ಎಂದು ಇಸ್ರೊ ತಿಳಿಸಿದೆ.

ಬೆಂಗಳೂರಿನ ಇಸ್ರೊ ಟೆಲಿಮೆಟ್ರಿ, ಟ್ರ್ಯಾಕಿಂಗ್ ಆ್ಯಂಡ್ ಕಮಾಂಡ್ ಸೆಂಟರ್ (ಐಎಸ್‌ಟಿಆರ್‌ಎಸಿ) ಕಕ್ಷೆ ಬದಲಾವಣೆ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದೆ. ಈಗ ಆದಿತ್ಯ 245 ಕಿ.ಮೀx22,459 ಕಿ.ಮೀ ಎತ್ತರ ಕಕ್ಷೆಯಲ್ಲಿ ಪರಿಭ್ರಮಣ ನಡೆಸುತ್ತಿದೆ.

ಮುಂದಿನ ಹಂತದ ಕಕ್ಷೆ ಬದಲಾವಣೆ ಸೆಪ್ಟೆಂಬರ್ 05, ಮಂಗಳವಾರ 3 ಗಂಟೆಗೆ ನಿಗದಿಯಾಗಿದೆ.

ಸೂರ್ಯನ ಅಧ್ಯಯನದ ಉದ್ದೇಶದ ಭಾರತದ ಮಹತ್ವಾಕಾಂಕ್ಷೆಯ ಆದಿತ್ಯ ಎಲ್1 ವೀಕ್ಷಣಾಲಯವನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್ ಅನ್ನು ಶ್ರೀಹರಿಕೋಟದ ಉಡಾವಣಾ ಕೇಂದ್ರದಿಂದ ಶನಿವಾರ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.

ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಗ್ರಾಂಜಿಯನ್ ಬಿಂದುವಿನಲ್ಲಿ ಆದಿತ್ಯ ಎಲ್–1 ಅಂತರಿಕ್ಷ ವೀಕ್ಷಣಾಲಯವನ್ನುಇರಿಸಲಾಗುವುದು. 125 ದಿನಗಳಲ್ಲಿ ಎಲ್–1 ಬಿಂದುವಿಗೆ ಸೇರಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.