ಶ್ರೀನಗರ: ಕಾಶ್ಮೀರದ ಮೊದಲ ಮುಸ್ಲಿಂ ಐಎಎಸ್ ಅಧಿಕಾರಿ ಮೊಹಮ್ಮದ್ ಶಫಿ ಪಂಡಿತ್ ಅವರು ಇಂದು ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ದೆಹಲಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಪಂಡಿತ್ ಅವರು 1969ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಆಗಿಯೂ ಕಾರ್ಯನಿರ್ವಹಿಸಿದ್ದರು. 1992ರಲ್ಲಿ ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿಯಾಗಿದ್ದಾಗ ಮಂಡಲ್ ಆಯೋಗದ ವರದಿಯನ್ನು ಹೊರತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಪಂಡಿತ್ ಅವರ ನಿಧನಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.