ನವದೆಹಲಿ: ಜೈಲಿಂದ ಬಂದ ನಂತರದ ಮೊದಲ ಮುಂಜಾನೆಯ ಕ್ಷಣಗಳನ್ನು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಪತ್ನಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿರುವ ಫೋಟೊವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಸೋಡಿಯಾ, ‘ಸ್ವತಂತ್ರ ಮುಂಜಾನೆಯ ಮೊದಲ ಚಹಾ... 17 ತಿಂಗಳ ನಂತರ!.. ನಮಗೆಲ್ಲ ಸಂವಿಧಾನ ಬದುಕುವ ಹಕ್ಕಿನ ಭರವಸೆ ನೀಡಿದೆ’ ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

‘ಎಲ್ಲರೊಂದಿಗೂ ಬದುಕುವ ಸ್ವತಂತ್ರವನ್ನು ಆ ದೇವರು ನಮಗೆ ಕರುಣಿಸಿದ್ದಾನೆ’ ಎಂದು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಆರೋಪಿಯಾಗಿ ತಿಹಾರ್ ಜೈಲಿನಲ್ಲಿದ್ದ ಸಿಸೋಡಿಯಾ ಅವರಿಗೆ ಶುಕ್ರವಾರ(ಆ.9) ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ವಿಚಾರಣೆ ಸಂದರ್ಭದಲ್ಲಿ ಅಧೀನ ನ್ಯಾಯಾಲಯಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ‘ವಿಚಾರಣೆ ಇಲ್ಲದೇ ದೀರ್ಘಕಾಲ ಸೆರೆಯಲ್ಲಿ ಇಡುವ ಮೂಲಕ, ಅವರ ತ್ವರಿತ ನ್ಯಾಯದ ಹಕ್ಕು ಮತ್ತು ಮೂಲಭೂತ ಹಕ್ಕಾದ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಂಡಂತಾಗಿದೆ’ ಎಂದು ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.