ಐಜ್ವಾಲ್: ಮಿಜೋರಾಂ ರಾಜ್ಯದ ರಾಜಧಾನಿ ಐಜ್ವಾಲ್ನಲ್ಲಿ ಮಂಗಳವಾರ ಬೆಳಿಗ್ಗೆ ಕಲ್ಲಿನ ಕ್ವಾರಿ ಕುಸಿದು 10 ಜನ ಸಾವನ್ನಪ್ಪಿದ್ದು ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿರಂತರ ಮಳೆಯ ಪರಿಣಾಮ ಈ ಕ್ವಾರಿ ಕುಸಿದಿದೆ ಎಂದು ಪೊಲೀಸರು ಹೇಳಿದ್ದಾರೆ. ನಗರದ ದಕ್ಷಿಣ ಹೊರವಲಯದಲ್ಲಿರುವ ಮೆಲ್ಥಮ್ ಪ್ರದೇಶದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

10 ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನಿರೀಕ್ಷಿಸಲಾಗುತ್ತಿದೆ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.