ಜಾಜ್ಪುರ: ಮೇಲ್ಸೇತುವೆಯಿಂದ ಬಸ್ ಕೆಳಗೆ ಬಿದ್ದ ಪರಿಣಾಮ ಮಹಿಳೆ ಸೇರಿದಂತೆ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಒಡಿಶಾದ ಜಾಜ್ಪುರದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಬಸ್ ಪುರಿಯಿಂದ ಪಶ್ಚಿಮ ಬಂಗಾಳದ ಕಡೆಗೆ ಪ್ರಯಾಣಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ-16ರ ಬಾರಾಬತಿ ಸೇತುವೆಯ ಮೇಲೆ ಈ ಅವಘಡ ಸಂಭವಿಸಿದೆ. ಈ ವೇಳೆ ಬಸ್ನಲ್ಲಿ ಸುಮಾರು 42ಕ್ಕೂ ಹೆಚ್ಚು ಪ್ರಯಾಣಿಕರಿದ್ದರು' ಎಂದು ಜಾಜ್ಪುರ ಎಸ್ಪಿ ವಿನಿತ್ ಅಗರ್ವಾಲ್ ಹೇಳಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ .

'ಅವಘಡದಲ್ಲಿ ಸುಮಾರು 38 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ' ಎಂದು ಮುಖ್ಯ ಜಿಲ್ಲಾ ವೈದ್ಯಾಧಿಕಾರಿ ಶಿಬಾಶಿಶ್ ಮೊಹರಾನಾ ತಿಳಿಸಿದ್ದಾರೆ.

₹3 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಅಪಘಾತದ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
.ವಿಜಯಪುರ | ಭೀಕರ ರಸ್ತೆ ಅಪಘಾತ: ನಾಲ್ವರು ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.