ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ ಐದನೇ ಪ್ರಕರಣದಲ್ಲಿ (ಡೊರಂಡ ಖಜಾನೆ ಪ್ರಕರಣ) ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ, ₹60 ಲಕ್ಷ ದಂಡ ವಿಧಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಫೆಬ್ರುವರಿ 15ರಂದು ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ಪರಿಗಣಿಸಿತ್ತು. ಶಿಕ್ಷೆಯ ಪ್ರಮಾಣವನ್ನು ನಂತರ ಪ್ರಕಟಿಸುವುದಾಗಿ ತಿಳಿಸಿತ್ತು.

ಇದನ್ನೂ ಓದಿ:ಮೇವು ಹಗರಣ| ಡೊರಂಡ ಖಜಾನೆ ಪ್ರಕರಣದಲ್ಲಿ ಲಾಲು ದೋಷಿ: ಸಿಬಿಐ ಕೋರ್ಟ್ ತೀರ್ಪು

ಈ ಪ್ರಕರಣದ ಇತರ 36ರ ಮಂದಿಗೆ ನ್ಯಾಯಾಲಯವು ಈ ಹಿಂದೆಯೇ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಘೋಷಿಸಿದೆ.

ಅವಿಭಜಿತ ಬಿಹಾರದಲ್ಲಿ ನಡೆದಿದ್ದ ₹950 ಕೋಟಿ ಮೊತ್ತದ ಮೇವು ಹಗರಣದಲ್ಲಿ, ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಖಜಾನೆಗಳಿಂದ ಹಣವನ್ನು ಅಕ್ರಮವಾಗಿ ಪಡೆದುಕೊಳ್ಳಲಾಗಿತ್ತು. ಡೊರಂಡ ಜಿಲ್ಲಾ ಸರ್ಕಾರಿ ಖಜಾನೆಯಿಂದ ₹139 ಕೋಟಿಗಳನ್ನು ಅಕ್ರಮವಾಗಿ ಪಡೆಯಲಾಗಿತ್ತು.

ಇದೇ ಮೇವು ಹಗರಣದ ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಂದ ಹಣ ಪಡೆದುಕೊಂಡ ನಾಲ್ಕು ಪ್ರಕರಣಗಳಲ್ಲಿ ಲಾಲು ಅವರಿಗೆ ಈಗಾಗಲೇ 14 ವರ್ಷಗಳ ಜೈಲು ಶಿಕ್ಷೆ ಮತ್ತು ಒಟ್ಟು ₹ 60 ಲಕ್ಷ ದಂಡ ವಿಧಿಸಲಾಗಿದೆ. ಈಗ ಶಿಕ್ಷೆ ವಿಧಿಸಿರುವುದು ಐದನೇ ಪ್ರಕರಣವಾಗಿದೆ.

ಇದನ್ನೂ ಓದಿ:ಆರ್ಜೆಡಿ ಅಧ್ಯಕ್ಷ ಸ್ಥಾನ ತ್ಯಜಿಸಲ್ಲವೆಂದ ಲಾಲು ಪ್ರಸಾದ್ ಯಾದವ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.