ಮಥುರಾ: ಕಲುಷಿತ ಆಹಾರ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 60ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಕೃಷ್ಣ ಜನ್ಮಾಷ್ಟಮಿ ಹಬ್ಬದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಹುರುಳಿ ಹಿಟ್ಟಿನಿಂದ ತಯಾರಿಸಿದ ಆಹಾರ ಪದಾರ್ಥ ಸೇವಿಸಿದ ಬಳಿಕ ಜನರಲ್ಲಿ ವಾಂತಿ, ತಲೆಸುತ್ತು ಮತ್ತು ಮೈ ನಡುಗುವಿಕೆ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದಾಗಿ ಗ್ರಾಮದ ಸುಮಾರು 60ಕ್ಕೂ ಅಧಿಕ ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಹುರುಳಿ ಹಿಟ್ಟಿನಿಂದ ತಯಾರಿಸಿದ ಆಹಾರವನ್ನು ಗ್ರಾಮದ ಸ್ಥಳೀಯ ಅಂಗಡಿಯಿಂದ ಖರೀದಿಸಲಾಗಿತ್ತು ಎಂದು ರೋಗಿಯೊಂದಿಗೆ ಬಂದಿದ್ದ ಪರ್‌ಖಮ್ ಗ್ರಾಮದ ನಿವಾಸಿಯೊಬ್ಬರು ಹೇಳಿದ್ದಾರೆ.

ಸೋಮವಾರ ಮಧ್ಯರಾತ್ರಿ 1 ಗಂಟೆಗೆ ಸುಮಾರು 29 ರೋಗಿಗಳು ವಾಂತಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ. ಇತರ ಕೆಲವು ರೋಗಿಗಳನ್ನು ಬೇರೆ ಬೇರೆ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.