ಚೆನ್ನೈ (ತಮಿಳುನಾಡು): ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾನೂನು ಜಾರಿ ಅಧಿಕಾರಿಗಳು (LEO) ಮುಂಬೈಗೆ ತೆರಳುತ್ತಿದ್ದ ಪ್ರಯಾಣಿಕನಿಂದ ಅಂದಾಜು ₹ 1.57 ಕೋಟಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ಶನಿವಾರ ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಪ್ರಯಾಣಿಕನ ಬ್ಯಾಗ್ನಲ್ಲಿದ್ದ 1,30,000 ಅಮೆರಿಕನ್ ಡಾಲರ್ ಹಾಗೂ 2,24,500 ಸೌದಿ ರಿಯಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ₹1.57 ಕೋಟಿ ಎಂದು ಅಂದಾಜಿಸಲಾಗಿದೆ.

ಇದು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾದ ದೊಡ್ಡ ಮೊತ್ತದ ವಿದೇಶಿ ಕರೆನ್ಸಿ. ತಪಾಸಣಾ ಮತ್ತು ಗುಪ್ತಚರ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಸಿಐಎಸ್ಎಫ್ ಶ್ಲಾಘಿಸಿದೆ.

ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಪ್ರಯಾಣಿಕನನ್ನು ಆದಾಯ ತೆರಿಗೆ ತನಿಖಾ ವಿಭಾಗದ ವಾಯು ಗುಪ್ತಚರ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
.ದೇವನಹಳ್ಳಿ: ₹20.75 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.