ಗುವಾಹಟಿ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿಅವರ ಆರೋಗ್ಯ ಸ್ಥಿತಿ ಸೋಮವಾರ ಬೆಳಗ್ಗೆ ಮತ್ತಷ್ಟು ಹದಗೆಟ್ಟಿದ್ದು, ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕೋವಿಡ್–19 ನಂತರ ಕಾಣಿಸಿಕೊಂಡ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಾಂಗ್ರೆಸ್ ಮುಖಂಡ ತರುಣ್ ಗೊಗೊಯಿದಾಖಲಾಗಿದ್ದಾರೆ. ಒಂಬತ್ತು ವೈದ್ಯರ ತಂಡ ಅವರ ಆರೋಗ್ಯ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಜಿಎಂಸಿಎಚ್ ಅಧೀಕ್ಷಕ ಅಭಿಜಿತ್ ಶರ್ಮಾ ತಿಳಿಸಿದ್ದಾರೆ.

'ಪ್ರಸ್ತುತ ಸರ್ (ಗೊಗೊಯಿ) ಸ್ಥಿತಿ ತುಂಬಾ ಗಂಭೀರವಾಗಿದೆ ಮತ್ತು ವೈದ್ಯರು ತಮ್ಮ ಕೈಲಾದಷ್ಟು ಪ್ರಯತ್ನ ಮಾಡುತ್ತಿದ್ದಾರೆ' ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಗೊಗೊಯಿಅವರ ಪುತ್ರ ಗೌರವ್ ಮತ್ತು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಜಿಎಂಸಿಎಚ್ ಆಸ್ಪತ್ರೆಯಲ್ಲಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಗೊಗೊಯಿಅವರು ಭಾನುವಾರ ಡಯಾಲಿಸಿಸ್ಗೆ ಒಳಗಾಗಿದ್ದರು. ಸದ್ಯ ಕೃತಕ ಉಸಿರಾಟದವ್ಯವಸ್ಥೆ ನೀಡಲಾಗಿದೆ, ಅವರ ರಕ್ತದೊತ್ತಡ ಏರಿಳಿತವಾಗುತ್ತಿದ್ದು, ಸಂಪೂರ್ಣವಾಗಿ ಯಂತ್ರಗಳ ಸಹಾಯದಿಂದಲೇ ಅವರು ಉಸಿರಾಡುತ್ತಿದ್ದಾರೆ.

ಮೂರು ಭಾರಿ ಮುಖ್ಯಮಂತ್ರಿಯಾಗಿದ್ದ 84 ವರ್ಷದ ಗೊಗೊಯಿಅವರನ್ನು ನವೆಂಬರ್ 2 ರಂದು ಜಿಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ರಾತ್ರಿ ಅವರ ಸ್ಥಿತಿ ಹದಗೆಟ್ಟಾಗ ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು. ಎರಡು ತಿಂಗಳ ಚಿಕಿತ್ಸೆಯ ಬಳಿಕ ಕೋವಿಡ್–19ನಿಂದ ಚೇತರಿಸಿಕೊಂಡು ಅಕ್ಟೋಬರ್ 25ರಂದು ಬಿಡುಗಡೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.