ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಯ (ಸಿಬಿಐ) ಮಾಜಿ ನಿರ್ದೇಶಕ ಅಶ್ವನಿ ಕುಮಾರ್ (69) ಶಿಮ್ಲಾದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅಶ್ವನಿ ಕುಮಾರ್ ಅವರು ಮಣಿಪುರ ಮತ್ತು ನಾಗಾಲ್ಯಾಂಡ್ನಲ್ಲಿ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದರು. ಅವರು ಹಿಮಾಚಲ ಪ್ರದೇಶದ ಶಿಮ್ಲಾದ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಶಿಮ್ಲಾ ಎಸ್ಪಿ ಮೋಹಿತ್ ಚಾವ್ಲಾ ಹೇಳಿದ್ದಾರೆ.

ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಅವರು ಕೆಲ ಕಾಲದಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಜುಲೈ 2013ರಿಂದ ಡಿಸೆಂಬರ್ 2013ರ ವರೆಗೂ ಅವರು ಮಣಿಪುರದ ಗಮರ್ನರ್ ಆಗಿದ್ದರು. ಅನಂತರ ನಾಗಾಲ್ಯಾಂಡ್ನ ಗವರ್ನರ್ ಆಗಿ 2014ರ ಜೂನ್ ವರೆಗೂ ಸೇವೆ ಸಲ್ಲಿಸಿದ್ದರು. ಮೇ 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಅವರು ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಅಶ್ವನಿ ಕುಮಾರ್ ಅವರು 1973ನೇ ಬ್ಯಾಚ್ನ ಐಪಿಎಸ್ ಅಧಿಕಾರಿ. 2008ರ ಆಗಸ್ಟ್ 2ರಂದು ಸಿಬಿಐ ನಿರ್ದೇಶಕರಾಗಿ ನೇಮಕವಾಗಿ, 2010ರ ನವೆಂಬರ್ 30ರಂದು ನಿವೃತ್ತರಾದರು. ಹಿಮಾಚಲ ಪ್ರದೇಶದ ಪೊಲೀಸ್ ಮಹಾನಿರ್ದೇಶಕರಾಗಿ, ಸಿಬಿಐ ಹಾಗೂ ಎಸ್ಪಿಜಿಯಲ್ಲೂ ಕಾರ್ಯನಿರ್ವಹಿಸಿದ್ದರು. ಅವರು ಶಿಮ್ಲಾ ಯೂನಿವರ್ಸಿಟಿಯಿಂದ ಪಿಎಚ್ಡಿ ಪಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.