ನವದೆಹಲಿ: ಸಿಬಿಐನ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ(68) ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು.

1974ನೇ ಬ್ಯಾಚ್ ಬಿಹಾರ ಕೇಡರ್ನ ಐಪಿಎಸ್ ಅಧಿಕಾರಿ (ನಿವೃತ್ತ) ಸಿನ್ಹಾ ಹಲವು ಪ್ರಮುಖ ಸ್ಥಾನಗಳ ಜವಾಬ್ದಾರಿ ನಿರ್ವಹಿಸಿದ್ದಾರೆ. ಭಾರತ-ಟಿಬೆಟ್ ಗಡಿ ಭದ್ರತಾ ಪಡೆಯ ಮಹಾನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಶುಕ್ರವಾರ ಬೆಳಿಗ್ಗೆ 4:30ಕ್ಕೆ ಸಿನ್ಹಾ ನಿಧನರಾದರು.

ಕೋವಿಡ್–19 ಸಂಬಂಧಿಸಿದ ಕಾರಣಗಳಿಂದಾಗಿ ಸಾವು ಸಂಭವಿಸಿರಬಹುದೆಂದು ವರದಿಯಾಗಿದೆ. ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಗುರುವಾರ ರಾತ್ರಿ ದೃಢಪಟ್ಟಿತ್ತು.

2012ರಲ್ಲಿ ಸಿಬಿಐ ನಿರ್ದೇಶಕರಾಗಿ ನೇಮಕವಾಗುವುದಕ್ಕೂ ಮುನ್ನ ರೈಲ್ವೆ ರಕ್ಷಣಾ ಪಡೆಯ (ಆರ್ಪಿಎಫ್) ಮುಖ್ಯಸ್ಥರಾಗಿ, ಸಿಬಿಐನ ಪಾಟ್ನಾ ಮತ್ತು ದೆಹಲಿಯಲ್ಲಿ ಹಲವು ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.