ನವದೆಹಲಿ: ಮುಂದಿನ ವರ್ಷ ಅಸ್ಸಾಂ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಹೇಳಿಕೆ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ರಂಜನ್ ಗೊಗೊಯಿ ಹೆಸರು ಇರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ ಎಂಬುದಾಗಿ ಕಾಂಗ್ರೆಸ್ ನಾಯಕರೂ ಆಗಿರುವತರುಣ್ ಗೊಗೊಯಿ ಹೇಳಿರುವುದನ್ನು ಹಲವು ಮಾಧ್ಯಮಗಳು ವರದಿ ಮಾಡಿವೆ.

ಗುವಾಹಟಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ತರುಣ್ ಗೊಗೊಯಿ, ‘ನಿವೃತ್ತ ಸಿಜೆಐ ರಾಜ್ಯಸಭೆಗೆ ಆಯ್ಕೆಯಾಗಲು ಸಾಧ್ಯವಾಗಿದೆ ಎಂದಾದರೆ ಅಸ್ಸಾಂನಲ್ಲಿ ಬಿಜೆಪಿಯ ಮುಂದಿನ ಸಿಎಂ ಅಭ್ಯರ್ಥಿಯಾಗಲು ಸಹ ಅವರು ಒಪ್ಪಿಕೊಳ್ಳಬಹುದು’ ಎಂದು ಹೇಳಿದ್ದಾರೆ.

ಇದನ್ನೂ ಓದಿ:ನಿವೃತ್ತ ನ್ಯಾಯಮೂರ್ತಿ ರಂಜನ್ ಗೊಗೊಯಿ ವಿರುದ್ಧದ ಅರ್ಜಿ ತಿರಸ್ಕೃತ

ಚುನಾವಣೆ ಎದುರಿಸಲು ಬಿಜೆಪಿಯೇತರ ಪಕ್ಷಗಳ ಮೈತ್ರಿ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯನಿರ್ವಹಿಸುತ್ತಿದೆ. ಎಐಯುಡಿಎಫ್, ಎಡ ಪಕ್ಷ ಮತ್ತು ಎಜಿಎಂ ಜತೆಗೂ ಮೈತ್ರಿ ಒಳಗೊಳ್ಳಲಿದೆ ಎಂದೂ ಅವರು ಘೋಷಿಸಿದ್ದಾರೆ.

126 ಸದಸ್ಯಬಲದ ಅಸ್ಸಾಂ ವಿಧಾನಸಭೆಗೆ 2016ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ದೊರೆತಿರಲಿಲ್ಲ. ಬಳಿಕ ಎಜಿಪಿ, ಬಿಪಿಎಫ್ ಮತ್ತು ಪಕ್ಷೇತ್ರ ಶಾಸಕರ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.