ನವದೆಹಲಿ: ಇಸ್ರೊ ಮಾಜಿ ಅಧ್ಯಕ್ಷ ಮತ್ತು ಹೊಸ ಶಿಕ್ಷಣ ನೀತಿಯ ಕರಡು ಸಮಿತಿಯ ಮುಖ್ಯಸ್ಥ ಕೆ.ಕಸ್ತೂರಿರಂಗನ್ ಅವರಿಗೆ ಶ್ರೀಲಂಕಾದಲ್ಲಿ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆಗಾಗಿ ಬೆಂಗಳೂರಿಗೆ ವಿಮಾನದ ಮೂಲಕ ಕರೆತರಲಾಗುತ್ತಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

83ರ ವರ್ಷದ ಕಸ್ತೂರಿರಂಗನ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿಗಳಾಗಿ ಹಾಗೂ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ರಾಜ್ಯಸಭೆಯ ಮಾಜಿ ಸದಸ್ಯರೂ ಹೌದು.

ಏಪ್ರಿಲ್ 2004ರಿಂದ 2009ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ನ ನಿರ್ದೇಶಕರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.