ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಮಂಗಳವಾರ ಬೆಳಿಗ್ಗೆ ನಿಧನರಾದರು.

ಅವರಿಗೆ 79 ವರ್ಷ ವಯಸ್ಸಾಗಿತ್ತು.

ಇದನ್ನೂ ಓದಿ: ಕೇರಳ ಮುಖ್ಯಮಂತ್ರಿಯಾಗಿ ಅಪಾರ ಸಾಧನೆ; ಉಮ್ಮನ್ ಚಾಂಡಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಉಮ್ಮನ್ ಚಾಂಡಿನ್ ನಿಧನ ವಾರ್ತೆಯನ್ನು ಅವರ ಪುತ್ರ ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಉಮ್ಮನ್ ಚಾಂಡಿ, ಎರಡು ಬಾರಿ ಕೇರಳದ ಮುಖ್ಯಮಂತ್ರಿಯಾಗಿದ್ದರು. 2004ರಿಂದ 2006ರವರೆಗೆ ಮೊದಲ ಬಾರಿ ಸಿಎಂ ಆಗಿದ್ದರು. ಬಳಿಕ 2011ರಿಂದ 2016ರ ವರೆಗೆ ಎರಡನೇ ಬಾರಿಗೆ ಅಧಿಕಾರ ನಡೆಸಿದ್ದರು.

ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಉಮ್ಮನ್ ಚಾಂಡಿ, 1970ರಿಂದ ಕೇರಳ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.