ನವದೆಹಲಿ: ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡ ಅವರಿಗೆ ಶನಿವಾರ ನಡೆಯಲಿರುವ ಜಿ 20 ಶೃಂಗಸಭೆಯ ಔತಣಕೂಟಕ್ಕೆ ಆಹ್ವಾನ ನೀಡಲಾಗಿದೆ.

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯ ‘ಭಾರತ್ ಮಂಟಪ‘ದಲ್ಲಿ ಶನಿವಾರ ಮತ್ತು ಭಾನುವಾರ ಜಿ20 ಶೃಂಗಸಭೆ ನಡೆಯುತ್ತಿದೆ. ಇದು ಭಾರತ ಆಯೋಜಿಸಿರುವ ಅತ್ಯಂತ ಉನ್ನತ ಮಟ್ಟದ ಅಂತರರಾಷ್ಟ್ರೀಯ ಶೃಂಗಸಭೆಗಳಲ್ಲಿ ಒಂದಾಗಿದೆ.

ಓದಿ: G20 Summit | ನಟರಾಜ ವಿಗ್ರಹ ಭಾರತದ ಪರಂಪರೆಗೆ ಸಾಕ್ಷಿ: ಪ್ರಧಾನಿ ಮೋದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ಈ ಔತಣಕೂಟ ನಡೆಯಲಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮಿಳುನಾಡಿನ ಎಂ.ಕೆ.ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಜಾರ್ಖಂಡ್ನ ಹೇಮಂತ್ ಸೊರೆನ್, ಪಂಜಾಬ್ನ ಭಗವಂತ್ ಮಾನ್ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ಅವರಿಗೂ ಔತಣಕೂಟಕ್ಕೆ ಆಹ್ವಾನ ನೀಡಲಾಗಿದೆ. ಅವರು ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಓದಿ: G20 Summit: ‘ಜಿ20 ಇಂಡಿಯಾ’ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಲು ಮೋದಿ ಮನವಿ

ಆಮಂತ್ರಣ ಪತ್ರಿಕೆಯಲ್ಲಿ ‘ಇಂಡಿಯಾ ಬದಲು ಭಾರತ್‘ ಪದ ಬಳಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಕೇಂದ್ರದ ಆಡಳಿತಾರೂಢ ಬಿಜೆಪಿ ರಾಜಕೀಯ ಲಾಭಕ್ಕಾಗಿ ಭಾರತವನ್ನು ಮರುನಾಮಕರಣ ಮಾಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಆರೋಪಿಸಿವೆ.

ಓದಿ: G20 Summit : ಕಣ್ಮನ ಸೆಳೆಯುವಂತೆ ಸಿಂಗಾರಗೊಂಡ ಭಾರತ ಮಂಟಪ, ಚಿತ್ರಗಳಲ್ಲಿ ನೋಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.