ಹೈದರಾಬಾದ್: ಬಿಆರ್ಎಸ್ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತೆಲಂಗಾಣ ವಿಧಾನಸಭಾ ಶಾಸಕರಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕೆಸಿಎಆರ್ ಅವರು ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಗಜ್ವೆಲ್ ಕ್ಷೇತ್ರದಿಂದ ಚುನಾಯಿತರಾಗಿದ್ದು, ಗುರುವಾರ ಸ್ಪೀಕರ್ ಗದ್ದಮ್ ಪ್ರಸಾದ್ ಕುಮಾರ್ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಧಾನಸಭೆಯ ವಿರೋಧಪಕ್ಷದ ನಾಯಕನಾಗಿಯೂ ಕೆಸಿಆರ್ ಕಾರ್ಯನಿರ್ವಹಿಸಲಿದ್ದಾರೆ.

ತೆಲಂಗಾಣ ವಿಧಾನಸಭೆಯ ಚುನಾಯಿತ ಪ್ರತಿನಿಧಿಗಳೆಲ್ಲರೂ ಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದ ಅಧಿವೇಶನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಆ ಸಮಯದಲ್ಲಿ ಕೆಸಿಆರ್ ಅವರು ತೊಡೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕಾರಣ ಪ್ರಮಾಣವಚನ ಸ್ವೀಕರಿಸಿರಲಿಲ್ಲ.

ಇದೀಗ ಗುಣಮುಖರಾಗಿರುವ ಕೆಸಿಆರ್ ಅವರು ಮುಂದಿನ ಲೋಕಸಭೆ ಚುನಾವಣೆ ದೃಷ್ದಿಯಿಂದ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುವ ಸಾಧ್ಯತೆಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.