ನವದೆಹಲಿ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಈ ಕುರಿತು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ಮಾಹಿತಿ ನೀಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 57 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಓದಿ:ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: ನಂದಿಗ್ರಾಮದಿಂದ ಮಮತಾ ಬ್ಯಾನರ್ಜಿ ಸ್ಪರ್ಧೆ

ಒಂದು ಕಾಲದಲ್ಲಿ ಮಮತಾ ಅವರ ಆತ್ಮೀಯ ಬಳಗದಲ್ಲಿದ್ದ ಸುವೇಂದು ಅಧಿಕಾರಿ ಡಿಸೆಂಬರ್‌ನಲ್ಲಿ ಶಾಸಕ ಸ್ಥಾನಕ್ಕೆ ಹಾಗೂ ತೃಣಮೂಲ ಕಾಂಗ್ರೆಸ್‌ಗೆ (ಟಿಎಂಸಿ) ರಾಜೀನಾಮೆ ನೀಡಿದ್ದರು. ಬಳಿಕ ಅವರು ಬಿಜೆಪಿಗೆ ಸೇರಿದ್ದರು. ಸ್ವಾಭಿಮಾನವುಳ್ಳವರು ಟಿಎಂಸಿಯಲ್ಲಿರಲು ಅಸಾಧ್ಯ ಎಂದಿದ್ದ ಅಧಿಕಾರಿ, ಆಡಳಿತಾರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಳಿಕ ಮಮತಾ ಹಾಗೂ ಅಧಿಕಾರಿ ನಡುವೆ ವಾಕ್ಸಮರ ಮುಂದುವರಿದಿತ್ತು.

ಶುಕ್ರವಾರವಷ್ಟೇ ಟಿಎಂಸಿಯು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತ್ತು. ಮಮತಾ ಅವರು ನಂದಿಗ್ರಾಮ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಇನ್ನಷ್ಟು...

ಮಮತಾರನ್ನು ಸೋಲಿಸದಿದ್ದರೆ ರಾಜಕೀಯದಿಂದ ನಿವೃತ್ತಿಯಾಗುವೆ: ಸುವೇಂದು ಅಧಿಕಾರಿ

ಸ್ವಾಭಿಮಾನವುಳ್ಳವರು ಟಿಎಂಸಿಯಲ್ಲಿರಲು ಅಸಾಧ್ಯ: ಸುವೇಂದು ಅಧಿಕಾರಿ

ಟಿಎಂಸಿ ಶಾಸಕ ಸ್ಥಾನಕ್ಕೆ ಸುವೇಂದು ಅಧಿಕಾರಿ ರಾಜೀನಾಮೆ: ಬಿಜೆಪಿ ಸ್ವಾಗತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.