ಬಾರಾಬಂಕಿ: ಕಂದಾಯ ಇಲಾಖೆ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಅಂಗಡಿಯೊಂದನ್ನು ನೆಲಸಮಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ಜೈದ್‌ಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ ಶನಿವಾರ ತಿಳಿಸಿದ್ದಾರೆ.

ಇಮಾಂಬಾಡ ಮಾರುಕಟ್ಟೆಯಲ್ಲಿ ಬಟ್ಟೆ ಅಂಗಡಿ ಹೊಂದಿದ್ದ ಜಲೀಲ್ ಅಹ್ಮದ್ ಎಂಬುವರು, ಅಕ್ಟೋಬರ್ 14ರಂದು ತಮ್ಮ ಅಂಗಡಿಯನ್ನು ಜೈದ್‌ಪುರ ಪೊಲೀಸರು ಅಕ್ರಮವಾಗಿ ನೆಲಸಮ ಮಾಡಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್ ಮೊರೆ ಹೋಗಿದ್ದರು.

ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್, ಕಂದಾಯ ಇಲಾಖೆ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ನೆಲಸಮಗೊಳಿಸಿರುವುದು ಕಾನೂನುಬಾಹಿರ. ಈ ಘಟನೆಗೆ ಕಾರಣರಾದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿತ್ತು. ಆ ಬಳಿಕ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.