ಚಂಡೀಗಢ: ಪಂಜಾಬ್ನ ಫತೇಘರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್ ರೈಲ್ವೆ ನಿಲ್ದಾಣದ ಬಳಿ ಹೌರಾ ಮೇಲ್ನ ಜನರಲ್ ಕೋಚ್ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ 10:30ರ ಸುಮಾರಿಗೆ ರೈಲು ಅಮೃತಸರದಿಂದ ಹೌರಾಕ್ಕೆ ತೆರಳುತ್ತಿದ್ದಾಗ ಪಟಾಕಿಗಳನ್ನು ತುಂಬಿದ್ದ ಪ್ಲಾಸ್ಟಿಕ್ ಬಕೆಟ್ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಫತೇಘರ್ ಸಾಹಿಬ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಗಮೋಹನ್ ಸಿಂಗ್ ತಿಳಿಸಿದ್ದಾರೆ.

ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸಿಂಗ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.