ತಿರುವನಂತಪುರ: ವಂಚನೆ ಪ್ರಕರಣದ ಆರೋಪಿಗಳಿಂದ ಲಂಚ ಪಡೆದ ಆರೋಪದ ಮೇಲೆ ಕರ್ನಾಟಕದ ಒಬ್ಬ ಇನ್‌ಸ್ಪೆಕ್ಟರ್ ಹಾಗೂ ಮೂವರು ಪೊಲೀಸರನ್ನು ಕೇರಳ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕರ್ನಾಟಕದಲ್ಲಿ ನಡೆದಿದ್ದ ಆನ್‌ಲೈನ್ ಕ್ರಿಪ್ಟೊಕರೆನ್ಸಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವ ಸಲುವಾಗಿ ಪೊಲೀಸರು ಆಗಸ್ಟ್ 1ರಂದು ಕೇರಳದ ಕೊಚ್ಚಿಗೆ ಬಂದಿದ್ದರು. ₹25 ಲಕ್ಷ ಲಂಚ ನೀಡಿದರೆ ಪ್ರಕರಣ ಇತ್ಯರ್ಥಗೊಳಿಸುವುದಾಗಿ ಅವರು ಆರೋಪಿಗಳಿಗೆ ಆಮಿಷ ಒಡ್ಡಿದ್ದರು. ಅಲ್ಲದೇ, ಅವರಿಂದ ₹3.95 ಲಕ್ಷ ಪಡೆದಿದ್ದರು ಎನ್ನಲಾಗಿದೆ.

ಈ ಕುರಿತು ದೂರು ದಾಖಲಾದ ಹಿನ್ನೆಲೆಯಲ್ಲಿ ಕೊಚ್ಚಿ ಪೊಲೀಸರು ಕರ್ನಾಟಕದ ನಾಲ್ವರನ್ನು ಬುಧವಾರ ಸಂಜೆ ವಶಕ್ಕೆ ಪಡೆದಿದ್ದಾರೆ.

‘ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನಮ್ಮ ಪೊಲೀಸರ ವಶದಲ್ಲಿರುವ ಕರ್ನಾಟಕ ಪೊಲೀಸರ ಕುರಿತ ಮಾಹಿತಿ ಕಲೆಹಾಕಲು ಮತ್ತು ಅವರು ಕೇರಳಕ್ಕೆ ಬಂದಿದ್ದ ಉದ್ದೇಶದ ಕುರಿತು ಪರಿಶೀಲಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಇಲಾಖೆ ಜೊತೆ ಸಂಪರ್ಕದಲ್ಲಿದ್ದೇವೆ. ಅವರು ನೀಡುವ ಮಾಹಿತಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಪರಿಶೀಲನೆ ಬಳಿಕವೇ ವಶದಲ್ಲಿರುವ ಪೊಲೀಸರ ಗುರುತು ಬಹಿರಂಗಪಡಿಸಲಾಗುವುದು’ ಎಂದು ಸಹಾಯಕ ಪೊಲೀಸ್ ಕಮೀಷನರ್ ಬೇಬಿ ಪಿ.ವಿ. ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.