ಪಟ್ಟಿಣಂತಿಟ್ಟ, ಕೇರಳ: ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಭಾರತ ಮೂಲದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ಕುವೈತ್ನಲ್ಲಿ ಸಂಭವಿಸಿದೆ.

ಮೃತರನ್ನು ಕೇರಳದ ಮ್ಯಾಥ್ಯೂ ಮುಜಾಕಲ್ ಹಾಗೂ ಅವರ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳು ಎಂದು ಗುರುತಿಸಲಾಗಿದೆ.

ಮ್ಯಾಥ್ಯೂ ಅವರು ಉದ್ಯೋಗಕ್ಕಾಗಿ ಕುವೈತ್ನ ಅಬ್ಬಾಸಿಯಾದಲ್ಲಿ ಕಳೆದ 15 ವರ್ಷದಿಂದ ಕುಟುಂಬದೊಂದಿಗೆ ನೆಲೆಸಿದ್ದರು. ಶುಕ್ರವಾರ ರಾತ್ರಿ ಅವರು ಮಲಗುವ ಕೋಣೆಯಲ್ಲಿ ಸಂಭವಿಸಿದ ಎ.ಸಿ ಯಂತ್ರದ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ದುರಂತ ಸಂಭವಿಸಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮೃತದೇಹಗಳನ್ನು ಭಾರತಕ್ಕೆ ಯಾವಾಗ ತರಲಾಗುತ್ತದೆ ಎಂಬ ಮಾಹಿತಿ ನಮಗೆ ಇನ್ನೂ ಸಿಕ್ಕಿಲ್ಲ ಎಂದು ಅವರು ತಿಳಿಸಿದ್ದಾರೆ.

ಕೊಚ್ಚಿ ಬಳಿ ನೆಡುಂಬಸ್ಸರಿ ಮೂಲದವರಾದ ಮ್ಯಾಥ್ಯೂ ಮುಜಾಕಲ್ ತಾಯಿ ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಕಳೆದ ಗುರುವಾರವಷ್ಟೇ ಅವರು ತಮ್ಮ ಮಕ್ಕಳು ಹಾಗೂ ಪತ್ನಿ ಜೊತೆ ರಜೆ ಮುಗಿಸಿಕೊಂಡು ಕುವೈತ್ಗೆ ತೆರಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.