ಪಾಲಕ್ಕಾಡ್ (ಕೇರಳ): ಶೋರನೂರ್ ರೈಲು ನಿಲ್ದಾಣದ ಬಳಿ ನವದೆಹಲಿ-ತಿರುವನಂತಪುರ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ರೈಲು ನಿಲ್ದಾಣದಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ಶೋರನೂರ್ ಸೇತುವೆಯ ಬಳಿ ರೈಲ್ವೆ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದ ವೇಳೆ ಕಾರ್ಮಿಕರಿಗೆ ರೈಲು ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಮೃತದೇಹಗಳು ರಕ್ತಸಿಕ್ತವಾಗಿದ್ದವು. ಮೂರು ಶವಗಳನ್ನು ಹೊರತೆಗೆಯಲಾಗಿದ್ದು, ಮತ್ತೊಬ್ಬರ ಶವ ನದಿಗೆ ಬಿದ್ದಿರುವುದರಿಂದ ಹುಡುಕಾಟ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಬರುತ್ತಿರುವುದನ್ನು ಕಾರ್ಮಿಕರು ಗಮನಿಸದೆ ಇರುವುದರಿಂದ ಅವಘಡ ಸಂಭವಿಸಿದೆ. ಘಟನೆ ಸಂಬಂಧ ತನಿಖೆ ನಡೆಯುತ್ತಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.