ನವದೆಹಲಿ: ಕೋವಿಡ್–19ರ ಸಮಯದಲ್ಲಿ 80 ಕೋಟಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಸಾಂಕ್ರಾಮಿಕ ಸಮಯದಲ್ಲಿ ಯಾರೂ ಹಸಿವಿನಿಂದ ಬಳಲದಂತೆ ಕೇಂದ್ರ ಸರ್ಕಾರ ಕ್ರಮವಹಿಸಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ.

ಭಾರತ ಜಿ-20 ಅಧ್ಯಕ್ಷತೆವಹಿಸಿಕೊಂಡಿದ್ದು, ಜಾಗತಿಕ ಮಟ್ಟದಲ್ಲಿ ಭಾರತ ಸದೃಢಗೊಳ್ಳಲು ಒಂದು ಪ್ರಮುಖ ಕಾರಣ ಎಂದರು.

ಜನವರಿ 1 ರಿಂದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಪೂರೈಸುವ ಯೋಜನೆಯಡಿ ₹2 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಬೆಳೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಸಲುವಾಗಿ ಬೆಂಬಲ ಬೆಲೆ ಮತ್ತು ಬೆಳೆ ವೈವಿಧ್ಯೀಕರಣವನ್ನು ಉತ್ತೇಜಿಸಿದೆ. ಇದರಿಂದ ರೈತರಿಗೆ ಕೃಷಿ ಮತ್ತು ಸಂಬಂಧಿತ ವಲಯದ ಬೆಳವಣಿಗೆಯು ವರ್ಷಗಳಿಂದ ಉತ್ಕೃಷ್ಟವಾಗಿದೆ. ಕಳೆದ ಹಣಕಾಸಿನ ವರ್ಷದಲ್ಲಿ ಕೃಷಿ ವಲಯದಲ್ಲಿ ಖಾಸಗಿ ಹೂಡಿಕೆಯು ಶೇ.9.3 ಹಾಗೂ 2020ರಲ್ಲಿ ಶೇ.7ರಷ್ಟು ಹೆಚ್ಚಾಗಿದೆ.

ಇದನ್ನು ಓದಿ: Union Budget: ಭದ್ರಾ ಮೇಲ್ಡಂಡೆ ಯೋಜನೆಗೆ ₹5,300 ಕೋಟಿ ಘೋಷಣೆ

ಜಗತ್ತು ಭಾರತವನ್ನು ಪ್ರಜ್ವಲಿಸುವ ನಕ್ಷತ್ರದಂತೆ ನೋಡುತ್ತಿದೆ: ನಿರ್ಮಲಾ ಸೀತಾರಾಮನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.